Mysore
18
broken clouds

Social Media

ಸೋಮವಾರ, 23 ಡಿಸೆಂಬರ್ 2024
Light
Dark

ದಸರಾಗೆ ಕಳೆ: ನಾಳೆಯಿಂದ(ಸೆ.24) “ಯುವಸಂಭ್ರಮ”

ಮೈಸೂರು: ನಾಡಹಬ್ಬ ಮೈಸೂರು ದಸರಾದ ಸಿದ್ಧತೆಗಳು ಭರದಿಂದ ಸಾಗಿವೆ. ಯುವ ಸಂಭ್ರಮದ ಮೂಲಕ ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ.

ಈ ಬಾರಿಯ ದಸರಾ ಮಹೋತ್ಸವ ಪ್ರಯುಕ್ತ, ಸೆ.24 ರಿಂದ 30ರವರೆಗೆ ಒಟ್ಟು 7ದಿನಗಳ ಕಾಲ ಮೈಸೂರು ವಿಶ್ವ ವಿದ್ಯಾನಿಲಯದ ಮಾನಸ ಗಂಗೋತ್ರಿಯ ಬಯಲು ರಂಗ ಮಂದಿರದಲ್ಲಿ ಕಾರ್ಯಕ್ರಮ ನಡೆಯಲಿದೆ. ನಾಳೆ ಅಂದರೆ ಸೆ.24 ರಂದು ಅದ್ದೂರಿಯಾಗಿ ಯುವ ಸಂಭ್ರಮಕ್ಕೆ ಚಾಲನೆ ಸಿಗಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಕ್ಕು ಮತ್ತು ಬೃಹತ್ ಕೈಗಾರಿಕಾ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಘನ ಉಪಸ್ಥಿತಿ ಇರಲಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದಾರೆ.

ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ ಹರೀಶ್ ಗೌಡ ಅಧ್ಯಕ್ಷತೆ ವಹಿಸಲಿದ್ದು, ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಶಿವರಾಜ ಎಸ್.ತಂಗಡಗಿ, ಪಶು ಸಂಗೋಪನೆ ಮತ್ತು ರೇಷ್ಮೆ ಇಲಾಖೆ ಸಚಿವರಾದ ಕೆ.ವೆಂಕಟೇಶ್, ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ನಿಗಮದ ಅಧ್ಯಕ್ಷರು ಹಾಗೂ ಹೆಚ್.ಡಿ ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅನಿಲ್ ಕುಮಾರ್ ಸಿ, ಚಾಮರಾಜನಗರ ವಿಧಾನಸಭಾ ಶಾಸಕರು ಹಾಗೂ ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿ. ನ ಅಧ್ಯಕ್ಷರಾದ ಸಿ.ಪುಟ್ಟರಂಗಶೆಟ್ಟಿ, ಚಾಮುಂಡೇಶ್ವರಿ ವಿದ್ಯುತ್ ನಿಗಮ ನಿಯಮಿತದ ಅಧ್ಯಕ್ಷರಾದ ಎ.ಬಿ ರಮೇಶ್ ಬಂಡಿ ಸಿದ್ದೇಗೌಡ ಹಾಗೂ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಡಾ.ಪುಷ್ಪ ಅಮರನಾಥ್ ಅವರು ಗೌರವ ಉಪಸ್ಥಿತರಿರಲಿದ್ದಾರೆ.

ಇನ್ನು ಮುಖ್ಯ ಅತಿಥಿಗಳಾಗಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಶಾಸಕರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರದ ಶಾಸಕರಾದ ಸುನಿಲ್ ಬೋಸ್ ಅವರು ಆಗಮಿಸಲಿದ್ದಾರೆ.

ಜೊತೆಗೆ, ಚಲನಚಿತ್ರ ನಟ ರೋರಿಂಗ್‌ ಸ್ಟಾರ್‌ ಮುರುಳಿ ಹಾಗೂ ಸಪ್ತಸಾಗರದಾಚೆ ಎಲ್ಲೋ ಚಿತ್ರದ ನಾಯಕ ನಟಿ ರುಕ್ಮೀಣಿ ವಸಂತ ಅವರು ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ.

ಯುವ ಸಂಭ್ರಮದಲ್ಲಿ ಎಲ್ಲಾ ಶಾಲೆ-ಕಾಲೇಜುಗಳು ನೃತ್ಯ ಪ್ರದರ್ಶಿಸಲಿದ್ದಾರೆ. ಇಲ್ಲಿ ಸೆಲೆಕ್ಟ್‌ ಆದ ಟೀಮ್‌ಗಳು ಯುವ ದಸರಾ ವೇದಿಕೆಯಲ್ಲಿ ಭಾಗಿಯಾಗಲಿದ್ದಾರೆ.

Tags: