Mysore
22
haze

Social Media

ಸೋಮವಾರ, 29 ಡಿಸೆಂಬರ್ 2025
Light
Dark

ದಸರಾ ಚಲನಚಿತ್ರೋತ್ಸವ 2024- ಪೋಸ್ಟರ್ ಬಿಡುಗಡೆ

ಮೈಸೂರು: ನಾಡ ಹಬ್ಬ ಮೈಸೂರು ದಸರಾ ಮಹೋತ್ಸವ 2024 ರ ಹಿನ್ನೆಲೆ ದಸರಾ ಚಲನಚಿತ್ರೋತ್ಸವ ಪೋಸ್ಟರ್ ಗಳನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಹೆಚ್.ಸಿ.ಮಹದೇವಪ್ಪ ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬಿಡುಗಡೆ ಮಾಡಿದರು.

ದಸರಾ ಮಹೋತ್ಸವ ಪ್ರಯುಕ್ತ ಅಕ್ಟೋಬರ್‌ 04 ರಿಂದ 10 ರವರೆಗೆ 7 ದಿನ ನಡೆಯಲಿರುವ ದಸರಾ ಚಲನ ಚಿತ್ರೋತ್ಸವದಲ್ಲಿ 112 ಸಿನಿಮಾಗಳು ಹುಣಸೂರು ರಸ್ತೆಯಲ್ಲಿರುವ ಡಿಆರ್‌ಸಿಯ ಒಂದು ಪರದೆ ಮತ್ತು ಮೈಸೂರಿನಲ್ಲಿರುವ ಐನಾಕ್ಸ್‌ನ ಮೂರು ಪರದೆಗಳಲ್ಲಿ ಪ್ರದರ್ಶನವಾಗಲಿವೆ.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಮಂಜೇಗೌಡ, ಮುಡಾ ಅಧ್ಯಕ್ಷರಾದ ಕೆ. ಮರಿಗೌಡ, ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮೀಕಾಂತ ರೆಡ್ಡಿ, ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಎಂ.ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಬಸವರಾಜು, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ರಂಗೇಗೌಡ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಕೆ.ಹರೀಶ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು‌.

Tags:
error: Content is protected !!