ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ ಅವರನನು ಅಕ್ಟೋಬರ್.5 ರವರೆಗೆ ಎಸ್‌ಐಟಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದ ಬೆನ್ನಲ್ಲೇ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಮಹಿಳೆ ಮೇಲೆ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಕಗ್ಗಲೀಪುರ ಠಾಣೆ ಪೊಲೀಸರು ಬಂಧಿಸಿದ್ದರು.
ನಂತರ ಶಾಸಕ ಮುನಿರತ್ನಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿತ್ತು. ಇದೀಗ ಅವರನ್ನು ಅಕ್ಟೋಬರ್.5 ರವರೆಗೆ ಎಸ್‌ಐಡಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ಈ ಮೂಲಕ ಬಿಜೆಪಿ ಶಾಸಕ ಮುನಿರತ್ನಗೆ ಸಂಕಷ್ಟ ಎದುರಾಗಿದ್ದು, ಪ್ರಕರಣದ ಸಂಪೂರ್ಣ ತನಿಖೆ ಆಗುವವರೆಗೂ ಜಾಮೀನು ಸಿಗುವುದು ಕಷ್ಟ ಎನ್ನಲಾಗುತ್ತಿದೆ.