ಬೆಂಗಳೂರು: ಮೈಸೂರು ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯರ ಪಾತ್ರವಿಲ್ಲ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನ್ಯಾಯಾಲಯ ಪ್ರಾಥಮಿಕ ತನಿಖೆಗೆ ಅನುಮತಿ ಕೊಟ್ಟಿದೆ. ಹೈಕೋರ್ಟ್ ತೀರ್ಪನ್ನು ನಾವು ಕಾನೂನಿನ ದೃಷ್ಟಿಯಿಂದಲೂ ಎದುರಿಸಲಿದ್ದೇವೆ ಎಂದರು.
ಬಿಜೆಪಿ ನಾಯಕ ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಜಾಮೀನಿನ ಮೇಲೆ ಓಡಾಡುತ್ತಿದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಮ ಕೈಗೊಳ್ಳುವ ಮೂಲಕ ರಾಜ್ಯಪಾಲರು ಬಹಳ ಸೆಲೆಕ್ಟೀವ್ ಆಗಿ ವರ್ತನೆ ಮಾಡಿದ್ದಾರೆ. ಇದನ್ನು ನಾವು ಒಪ್ಪಲ್ಲ. ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ತಪ್ಪು ಮಾಡಿಲ್ಲ. ನಾವೆಲ್ಲಾ ಸಿದ್ದರಾಮಯ್ಯ ಬೆಂಬಲಕ್ಕೆ ನಿಲ್ಲುತ್ತೇವೆ ಎಂದು ಹೇಳಿದರು.