ಬೆಂಗಳೂರು: ಆತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲು ಸೇರಿರುವ ಶಾಸಕ ಮುನಿರತ್ನಗೆ ಆರ್.ಆರ್.ಕ್ಷೇತ್ರದಲ್ಲಿ 2020ರಿಂದ 2022ರವರೆಗೆ ನಡೆದ ಕಾಮಗಾರಿಗಳ ತನಿಖೆಗೆ ಆದೇಶಿಸಿದ್ದರಿಂದ ಮತ್ತೊಂದು ಸಂಕಷ್ಟ ಎದುರಾಗಿದೆ.
ಬೆಂಗಳೂರು ಬೃಹತ್ ಮಹಾನಗರ ಪಾಲಿಕೆಯ ವ್ಯಾಪ್ತಿಗೆ ಒಳಪಡುವ ಆರ್.ಆರ್.ಕ್ಷೇತ್ರದಲ್ಲಿ 2020ರ ಸೆಪ್ಟಂಬರ್‌ನಿಂದ 2022ರ ಜುಲೈ.19ರ ಅವಧಿಯಲ್ಲಿ ನಡೆದ ಕಾಮಗಾರಿಗಳಲ್ಲಿ 500 ಕೋಟಿ ರೂ.ಗಳಿಗೂ ಅಧಿಕ ಅವ್ಯವಹಾರ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ. ಹೀಗಾಗಿ ನಗರ ಪಾಲಿಕೆ ಕಂದಾಯ ವಿಭಾಗದ ವಿಶೇಷ ಆಯುಕ್ತರ ನೇತೃತ್ವದಲ್ಲಿ ತನಿಖೆಗೆ ಆದೇಶ ನೀಡಲಾಗಿದೆ.
ಶಾಸಕ ಮುನಿರತ್ನ ಅವಧಿಯಲ್ಲಿ ಕಾಮಗಾರಿ ನಡೆಸದೇ ಬಿಲ್ ಮಾಡಿಸಿಕೊಂಡಿರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೆಪ್ಟೆಂಬರ್.23ರಂದೇ ತನಿಖೆಗೆ ಆದೇಶ ನೀಡಿದ್ದರು. ಆದರೆ, ಇದೀಗ ನಗರ ಪಾಲಿಕೆಯ ಕಂದಾಯ ವಿಶೇಷ ಮುನೀಶ್ ಮೌದ್ಗೀಲ್ ನೇತೃತ್ವದಲ್ಲಿ ತನಿಖೆಗೆ ಸಮಿತಿ ರಚಿಸಿದೆ.