Mysore
26
haze

Social Media

ಸೋಮವಾರ, 09 ಫೆಬ್ರವರಿ 2026
Light
Dark

ಸಿದ್ದರಾಮಯ್ಯಗೆ ಶಾಕ್‌ ಮೇಲೆ ಶಾಕ್:‌ ಸಿಎಂ ವಿರುದ್ಧ ಎಫ್‌ಐಆರ್‌ ದಾಖಲಿಸಲು ಕೋರ್ಟ್‌ ಆದೇಶ

ಬೆಂಗಳೂರು: ಸಿಎಂ ಸಿದ್ದರಾಮಯ್ಯಗೆ ಶಾಕ್‌ ಮೇಲೆ ಶಾಕ್‌ ಎದುರಾಗಿದ್ದು, ಮೈಸೂರು ಮುಡಾ ನಿವೇಶನ ಹಂಚಿಕೆ ಅಕ್ರಮ ಆರೋಪ ಪ್ರಕರಣದಲ್ಲಿ ಆರೋಪಿಯಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್‌ ದಾಖಲಿಸಲು ಮೈಸೂರು ಲೋಕಾಯುಕ್ತ ಪೊಲೀಸರಿಗೆ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.

ತನಿಖೆ ನಡೆಸಿ ಮೂರು ತಿಂಗಳ ಒಳಗಾಗಿ ವಿಚಾರಣಾ ನ್ಯಾಯಾಲಯಕ್ಕೆ ಮಾಹಿತಿ ಸಲ್ಲಿಸಲು ನ್ಯಾಯಾಧೀಶರು ನಿರ್ದೇಶನ ಮಾಡಿದ್ದಾರೆ.

ಮೈಸೂರಿನ ಸ್ನೇಹಮಯಿ ಕೃಷ್ಣ ದಾಖಲಿಸಿದ್ದ ಖಾಸಗಿ ಕ್ರಿಮಿನಲ್‌ ದೂರಿನ ವಿಚಾರಣೆ ಆಲಿಸಿ ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಾಧೀಶರಾದ ಸಂತೋಷ್‌ ಗಜಾನನ ಭಟ್‌ ಅವರಿಂದು ಉಕ್ತಲೇಖನದ ಮೂಲಕ ಆದೇಶಿಸಿದ್ದಾರೆ.

ಈ ಮೂಲಕ ಸಿಎಂ ಸಿದ್ದರಾಮಯ್ಯಗೆ ಶಾಕ್‌ ಮೇಲೆ ಶಾಕ್‌ ಎದುರಾಗಿದೆ. ಇನ್ನೊಂದೆಡೆ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಈ ಎಲ್ಲಾ ಬೆಳವಣಿಗೆ ಮಧ್ಯೆ ಸಿಎಂ ಮುಂದಿನ ನಡೆ ಏನು ಎಂಬುದೇ ಎಲ್ಲರ ಯಕ್ಷ ಪ್ರಶ್ನೆಯಾಗಿದೆ.

 

 

 

Tags:
error: Content is protected !!