Mysore
25
broken clouds

Social Media

ಮಂಗಳವಾರ, 25 ಆಗಸ್ಟ್ 2026
Light
Dark

ಮೈಸೂರು ದಸರಾ: ಸೆ .26ಕ್ಕೆ ಚಲನಚಿತ್ರೋತ್ಸವದ ಪಾಸ್ ವಿತರಣೆ

ಮೈಸೂರು: ಮೈಸೂರು ದಸರಾ ಮಹೋತ್ಸವ 2024 ರ ಸಂಬಂಧ ಚಲನಚಿತ್ರೋತ್ಸವ ಉಪಸಮಿತಿ ವತಿಯಿಂದ ಅಕ್ಟೋಬರ್ 04 ರಿಂದ 10 ರವರೆಗೆ ನಗರದ ಮಾಲ್ ಆಫ್ ಮೈಸೂರಿನ ಐನಾಕ್ಸ್ ಹಾಗೂ ಡಿ ಆರ್ ಸಿ ಪರದೆಗಳಲ್ಲಿ ಚಲನಚಿತ್ರಗಳ ಪ್ರದರ್ಶನವನ್ನು ಆಯೋಜಿಸಲಾಗಿದೆ.

ಈ ಸಂಬಂಧ ಸೆಪ್ಟೆಂಬರ್ 26 ರಂದು (ಗುರುವಾರ) ಬೆಳಿಗ್ಗೆ 10.30 ರಿಂದ ಸಂಜೆ 4.30 ರವರೆಗೆ ನಗರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಸಿನಿಮಾ ಪ್ರಿಯರಿಗೆ ಚಲನ ಚಿತ್ರೋತ್ಸವ ಪ್ರದರ್ಶನದ ಪಾಸ್ ವಿತರಣೆ ಮಾಡಲಾಗುತ್ತದೆ.

ಚಲನಚಿತ್ರೋತ್ಸವ ಪಾಸ್ ದರ ಸಾಮಾನ್ಯರಿಗೆ 500 ರೂ.ಗಳಾಗಿದ್ದರೆ ವಿದ್ಯಾರ್ಥಿಗಳಿಗೆ ಹಾಗೂ ಹಿರಿಯ ನಾಗರಿಕರಿಗೆ 300 ರೂ.ಗಳಾಗಿರುತ್ತವೆ. ಈ ಪಾಸ್ ಏಳು ದಿನಗಳವರೆಗೂ ಚಾಲ್ತಿಯಲ್ಲಿರುತ್ತದೆ.

ಪಾಸ್ ಪಡೆದುಕೊಳ್ಳಲು ಆಧಾರ್ ಕಾರ್ಡ್ ಪ್ರತಿಯನ್ನು ತರತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ ಶ್ರೇಯಸ್, ಮೊ.ಸಂ: 7892543852 ಅನ್ನು ಸಂಪರ್ಕಿಸಬಹುದು ಎಂದು ಚಲನಚಿತ್ರೋತ್ಸವ ಉಪಸಮಿತಿಯ ಕಾರ್ಯದರ್ಶಿ ಹರೀಶ್ ಟಿ.ಕೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:
error: Content is protected !!