Mysore
25
few clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಕ್ರೀಡಾಪಟುಗಳು ಉತ್ಸಾಹದಿಂದ ಕ್ರೀಡೆಯಲ್ಲಿ ಪಾಲ್ಗೊಳ್ಳಿ: ಗಂಗಾಧರಸ್ವಾಮಿ

ಮಂಡ್ಯ:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಆಯೋಜಿಸಲಾಗಿರುವ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳೆಲ್ಲರೂ ಉತ್ಸಾಹದಿಂದ ಕ್ರೀಡೆಯಲ್ಲಿ ಪಾಲ್ಗೊಳ್ಳಿ ಎಂದು ಜಿಲ್ಲಾ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಗಂಗಾಧರಸ್ವಾಮಿ ಅವರು ತಿಳಿಸಿದರು.

ಅವರು ಇಂದು ಸರ್.ಎಂ ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ ಹಾಗೂ ಶಾಲಾ ಶಿಕ್ಷಣ ಇಲಾಖೆ ಇವರ ಸಹಯೋಗದಲ್ಲಿ ನಡೆದ 2024-25ನೇ ಸಾಲಿನ ಮಂಡ್ಯ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕ್ರೀಡೆಯಲ್ಲಿ ಭಾಗವಹಿಸುವ ಎಲ್ಲರೂ ಸಹ ಗೆಲ್ಲಲು ಅಥವಾ ಸೋಲಲು ಸಾಧ್ಯವಿಲ್ಲ. ಯಾರಾದರೂ ಒಬ್ಬರು ಗೆಲುವನ್ನು ಪಡೆದುಕೊಂಡರೆ, ಇನ್ನೊಬ್ಬರು ಸೋಲಬೇಕಾಗುತ್ತದೆ. ಸೋಲು, ಗೆಲುವು ಕ್ರೀಡೆಯಲ್ಲಿ ಸರ್ವೆ ಸಾಮಾನ್ಯವಾಗಿರುತ್ತದೆ. ಕ್ರೀಡೆಯಲ್ಲಿ ಭಾಗವಹಿಸುವಿಕೆ ಮುಖ್ಯವಾಗಿರುತ್ತದೆ. ಕ್ರೀಡಾ ಮನೋಭಾವದಿಂದ ಎಲ್ಲರೂ ಭಾಗವಹಿಸಿ ತೀರ್ಪುಗಾರರು ನೀಡುವ ತೀರ್ಪಿಗೆ ಬದ್ಧರಾಗಿ ಎಂದು ಹೇಳಿದರು.

ಇಂದು ಮಂಡ್ಯ ಜಿಲ್ಲೆಯ 7 ತಾಲ್ಲೂಕುಗಳಿಂದಲೂ ಕ್ರೀಡಾಪಟುಗಳು ಆಗಮಿಸಿದ್ದು, ಇಲ್ಲಿ ಆಗಮಿಸಿರುವ ಕ್ರೀಡಾಪಟುಗಳು ಸ್ಪರ್ಧಾತ್ಮಕವಾಗಿ, ಬಹಳ ಉತ್ಸುಕತೆಯಿಂದ ಕ್ರೀಡೆಯಲ್ಲಿ ಪಾಲ್ಗೊಳ್ಳಿ. ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡಬೇಡಿ. ಭಾಗವಹಿಸಿರುವ ಪ್ರತಿಯೊಬ್ಬರಿಗೂ ಶುಭವಾಗಲಿ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಓಂ ಪ್ರಕಾಶ್, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಪರಮಶಿವಮೂರ್ತಿ, ತಾಲ್ಲೂಕು ದೈಹಿಕ ಶಿಕ್ಷಣದ ಪರಿವೀಕ್ಷಕರುಗಳಾದ ವಿಜಯಕುಮಾರ್, ಹೂವಯ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tags: