Mysore
21
overcast clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಮೈಸೂರು ದಸರಾ: ಸಿಎಂ ಸೇರಿದಂತೆ ಗಣ್ಯರನ್ನ ಅಧಿಕೃತವಾಗಿ ಆಹ್ವಾನಿಸಿದ ಜಿಲ್ಲಾಡಳಿತದ

ಮೈಸೂರು: ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಹೆಚ್.ಸಿ.ಮಹದೇವಪ್ಪ ಅವರು ಇಂದು ಆಹ್ವಾನ ನೀಡಿದರು.

ಕೆ.ಆರ್. ನಗರ ವಿಧಾನ ಸಭಾ ಶಾಸಕ ಡಿ.ರವಿಶಂಕರ್, ಎಚ್‍.ಡಿ ಕೋಟೆ ಶಾಸಕರಾದ ಅನಿಲ್ ಕುಮಾರ್, ವಿಧಾನ ಪರಿಷತ್ ಶಾಸಕ ಡಾ ಯತೀಂದ್ರ ಎಸ್, ಸಿ.ಎನ್.ಮಂಜೇಗೌಡ, ಡಾ ತಿಮ್ಮಯ್ಯ, ಜಿಲ್ಲಾಧಿಕಾರಿ ಜಿ. ಲಕ್ಷ್ಮೀ ಕಾಂತ ರೆಡ್ಡಿ ಹಾಗೂ ಸ್ವಾಗತ ಸಮಿತಿಯ ಅಧಿಕಾರಿಗಳು ಮತ್ತಿತರರೊಂದಿಗೆ ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾಕ್ಕೆ ತೆರಳಿದ ಅವರು, ದಸರಾ ಕಾರ್ಯಕ್ರಮಗಳಲ್ಲಿ ಭಾಗಿಯಾಗುವಂತೆ ಆಮಂತ್ರಿಸಿದರು.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ಗೆ ಆಹ್ವಾನ
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಆಹ್ವಾನಿಸಲು ರಾಜಭವನಕ್ಕೆ ತೆರಳಿದ ಮೈಸೂರು ಜಿಲ್ಲಾಡಳಿತ ಅವರಿಗೆ ಅಧಿಕೃತ ಆಹ್ವಾನ ನೀಡಿತು.

ವಿಧಾನಸಭೆಯ ಸ್ಪೀಕರ್ ಯುಟಿ ಖಾದರ್, ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌, ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಹೆಚ್.ಸಿ. ಮಹದೇವಪ್ಪನ ಅವರ ಸ್ವಗೃಹಕ್ಕೆ ತೆರಳಿದ ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತ ರೆಡ್ಡಿ ನಿಯೋಗವು ಮೈಸೂರು ದಸರಾಗೆ ಗೌರವಪೂರ್ವಕವಾಗಿ ಅಧಿಕೃತವಾಗಿ ಆಮಂತ್ರಣ ನೀಡಿದರು.

ಈ ಸಂದರ್ಭದಲ್ಲಿ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಳಾದ ಕೆ.ಎಂ.ಗಾಯಿತ್ರಿ, ಅಪರ ಜಿಲ್ಲಾಧಿಕಾರಿ ಡಾ ಪಿ. ಶಿವರಾಜು ಹಾಗೂ ಸ್ವಾಗತ ಸಮಿತಿಯ ಎಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು.

Tags: