ಮೈಸೂರು: ನಾಗರಿಕ ಸಮಾಜದಲ್ಲಿ ಸಮಾಜಿಕ ಬಹಿಷ್ಕಾರ ಎನ್ನುವ ಅನಿಷ್ಟ ಪದ್ದತಿ ಬುಡ ಸಮೇತ ತೆಗೆದು ಹಾಕಬೇಕೆಂದು ಮನವ ಹಕ್ಕುಗಳ ಅಯೋಗದ ಅಧ್ಯಕ್ಷರಾದ ಶ್ಯಾಂಭಟ್ ಹೇಳಿದರು.
ಇಂದು ನಂಜನಗೂಡಿನ ಪ್ರವಾಸಿ ಮಂದಿರದಲ್ಲಿ ಆಯೋಜಿಸಲಾಗಿದ್ದ, ಸಾಮಾಜಿಕ ಬಹಿಷ್ಕಾರ ಘಟನೆಗಳ ಸಂಬಂಧ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾಮಾಜಿಕ ಬಹಿಷ್ಕಾರದಂತಹ ಪ್ರಕರಣಗಳು ಕಂಡುಬಂದಲ್ಲಿ ಅವುಗಳನ್ನು ಪತ್ರಿಕೆಗಳು, ಸುದ್ದಿ ವಾಹಿನಿಗಳಲ್ಲಿ ಹೆಚ್ಚಾಗಿ ಪ್ರಕಟಿಸುವ ಮೂಲಕ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಇದರ ವಿದುದ್ದ ತೆಗೆದುಕೊಂಡಂತಹ ಕ್ರಮಗಳ ಬಗ್ಗೆ ಹೆಚ್ಚು ಪ್ರಕಟಿಸುವ ಮೂಲಕ ಜನರಲ್ಲಿ ಅರಿವು ಮೂಡಿಸಬೇಕು ಎಂದು ಹೇಳಿದರು.
ಸಾಮಾಜಿಕ ಬಹಿಷ್ಕಾರ ಎಂಬ ಪಿಡುಗು ತೊಲಗಬೇಕು ಇದನ್ನು ಬುಡ ಸಮೇತ ಕೀಳಲು ಅಧಿಕಾರಿಗಳು ಇದರ ಬಗ್ಗೆ ಗಮನಹರಿಸಿ ಮುಖ್ಯವಾಗಿ ತಹಸಿಲ್ದಾರ್ ಸಿಡಿಪಿಓ ಮತ್ತು ಪೊಲೀಸ್ ಇಲಾಖೆಯವರು ಇದರ ಬಗ್ಗೆ ಹೆಚ್ಚಾಗಿ ಗಮನ ವಹಿಸಬೇಕು. ಇಂತಹ ಘಟನೆ ಸಂಭವಿಸಿದಲ್ಲಿ ಕೂಡಲೇ ಕ್ರಮ ವಹಿಸಿ ನಮ್ಮ ಗಮನಕ್ಕೆ ತರಬೇಕು ಎಂದು ಸೂಚನೆ ನೀಡಿದರು.
ಸಾಮಾಜಿಕ ಬಹಿಷ್ಕಾರದ ದೂರಿನ ಹಿನ್ನೆಲೆ ಕಂದೇಗಾಲ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದವರು. ಗ್ರಾಮದಲ್ಲಿ ಬಹಿಷ್ಕಾರವನ್ನು ಹಾಕಿರುವಂತಹ ವಾತಾವರಣ ಕಾಣುತಿಲ್ಲ ಒಂದು ವೇಳೆ ಅಂತಹ ಬೆಳವಣಿಗೆಗಳಾದರೆ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯರಾದ ವೆಂಟಿಗೋಡಿ, ನಂಜನಗೂಡು ಉಪ ವಿಭಾಗೀಯ ಡಿ ವೈ ಎಸ್ ಪಿ ರಘು, ತಾಲೂಕು ದಂಡಾಧಿಕಾರಿ ಶಿವಕುಮಾರ್, ಕಾಸನೂರು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಜೇಶ್, ನಗರಸಭೆ ಆಯುಕ್ತ ನಂಜುಂಡಸ್ವಾಮಿ, ಸಿಡಿಪಿಓಗಳಾದ ಭವ್ಯಶ್ರೀ ಮತ್ತು ಮಂಜುಳಾ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.