Mysore
21
overcast clouds

Social Media

ಭಾನುವಾರ, 16 ಆಗಸ್ಟ್ 2026
Light
Dark

ಮ.ಬೆಟ್ಟದಲ್ಲಿ ಹುಂಡಿ ಎಣಿಕೆ: 28ದಿನದಲ್ಲಿ 1.64 ಕೋಟಿ ಸಂಗ್ರಹ

ಹನೂರು : ತಾಲ್ಲೂಕಿನ  ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 28 ದಿನಗಳ ಅವಧಿಯಲ್ಲಿ 1.64 ಕೋಟಿ ರೂ. ಸಂಗ್ರಹವಾಗಿದೆ.

ಮ. ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ ಮಠದ ಅಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿರವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಣಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಿಸಲಾಯಿತು. ಎಣಿಕೆ ಕಾರ್ಯವು ಸಂಜೆ 5:00 ಗಂಟೆಯವರೆಗೂ ನಡೆಯಿತು.

ಶ್ರಾವಣ ಮಾಸದ ಕುಂಬೋತ್ಸವ, ಅಮಾವಾಸ್ಯೆ, ಸರ್ಕಾರಿ ರಜಾ ದಿನಗಳು ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ಹರಕೆಯ ರೂಪದಲ್ಲಿ 1,64,22,932 ನಗದು 21 ಗ್ರಾಂ ಚಿನ್ನ ಹಾಗೂ 2.100 ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ.

ಇದಲ್ಲದೆ ಇ ಹುಂಡಿಯಿಂದ 2,89,713 ನೇಪಾಳದ 5 ನೋಟು ಸೇರಿದಂತೆ ಇತರೆ ದೇಶಗಳ ನೋಟುಗಳು ಇದಲ್ಲದೆ ಚಲಾವಣೆಯಲ್ಲಿ ಇಲ್ಲದ 2000 ಮುಖಬೆಲೆಯ 12 ನೋಟುಗಳು ಹುಂಡಿಯಲ್ಲಿ ಹಾಕಿದ್ದಾರೆ.

ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು,ಉಪ ಕಾರ್ಯದರ್ಶಿ ಚಂದ್ರಶೇಖರ್, ಲೆಕ್ಕಾ ಅಧೀಕ್ಷಕ ನಾಗೇಶ್, ಜಿಲ್ಲಾಡಳಿತ ಕಚೇರಿ ಮುಜರಾಯಿ ಶಾಖೆಯ ಶ್ವೇತಾ, ಬ್ಯಾಂಕ್ ಆಫ್ ಬರೋಡ ನೌಕರರು ಹಾಗೂ ಪ್ರಾಧಿಕಾರದ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದರು.

Tags:
error: Content is protected !!