Mysore
21
mist

Social Media

ಸೋಮವಾರ, 23 ಡಿಸೆಂಬರ್ 2024
Light
Dark

ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ಸಂಪುಟ ಸಭೆಯಲ್ಲಿ ನಿರ್ಣಯ

ಬೆಂಗಳೂರು: ರಾಜ್ಯದ ಪಶ್ಚಿಮ ಘಟ್ಟಗಳ ಕುರಿತ ಕಸ್ತೂರಿರಂಗನ್‌ ವರದಿಯನ್ನು ತಿರಸ್ಕರಿಸಲು ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ವಿಧಾನಸೌಧಲದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ.

ಸಾಕಷ್ಟು ವಿರೋಧ ವ್ಯಕ್ತವಾಗಿದ್ದ ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಲು ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆ ಈ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಭೆ ಬಳಿಕ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ.

ಪಶ್ಚಿಮ ಘಟ್ಟಗಳಲ್ಲಿ ಮಾನವನ ಹಸ್ತಕ್ಷೇಪ ಮಾಡುತ್ತಿರುವುದರಿಂದಾಗಿ ಪರಿಸರಕ್ಕೆ ಧಕ್ಕೆ ಉಂಟಾಗುತ್ತಿದೆ. ಆ ಮೂಲಕ ಜೀವ ಸಂಕುಲಕ್ಕೂ ಅಪಾಯ ಎದುರಾಗಲಿದೆ ಎನ್ನುವುದು ಪರಿಸರ ತಜ್ಞರ ಆತಂಕವಾಗಿತ್ತು. ಇದಕ್ಕಾಗಿ ಕಸ್ತೂರಿ ರಂಗನ್ ವರದಿಯನ್ನು ಸಿದ್ಧಪಡಿಸಲಾಗಿತ್ತು. ಆದರೆ ಭಾರಿ ವಿರೋಧದ ನಡುವೆ ಇಂದಿನ ಸಂಪುಟ ಸಭೆಯಲ್ಲಿ ವರದಿಯನ್ನು ತಿರಸ್ಕಾರ ಮಾಡಲಾಗಿದೆ ಎಂದರು.

ಇತ್ತೀಚೆಗೆ ಕಸ್ತೂರಿ ರಂಗನ್ ವರದಿ ಜಾರಿಗೆ ಜನಪ್ರತಿನಿಧಿಗಳ ಸಭೆಯಲ್ಲಿ ಸಮ್ಮತಿಸಲಾಗಿತ್ತು. ಆದರೆ ಕೇಂದ್ರ ಸರ್ಕಾರದ ಕಸ್ತೂರಿರಂಗನ್ ಸಮಿತಿಯ ಶಿಫಾರಸುಗಳನ್ನು ಕರ್ನಾಟಕ ಸರ್ಕಾರ ಪೂರ್ಣವಾಗಿ ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಇತ್ತೀಚೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕೂಡ ಹೇಳಿದ್ದರು. ಪಶ್ಚಿಮ ಘಟ್ಟಗಳ ಪರಿಸರ ರಕ್ಷಣೆ ಉದ್ದೇಶದಿಂದಾಗಿ ಪರಿಸರ ತಜ್ಞ ಮಾಧವ ಗಾಡ್ಗಿಲ್ ಎಂಬುವವರ ಅಧ್ಯಕ್ಷತೆಯಲ್ಲಿ ಕೆಂದ್ರ ಸರ್ಕಾರ ಒಂದು ಸಮಿತಿ ರಚಿಸಿತ್ತು. ಅವರು 2011ರ ಆಗಸ್ಟ್ 31ರಂದು ಸರ್ಕಾರಕ್ಕೆ ತಮ್ಮ ವರದಿ ಸಲ್ಲಿಸಿದ್ದರು.

Tags: