Mysore
20
broken clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಸಚಿವ ಎಚ್.ಸಿ.ಮಹದೇವಪ್ಪ ವಾಗ್ದಾಳಿ

ಮೈಸೂರು: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಸಚಿವ ಎಚ್.ಸಿ.ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಸಚಿವ ಎಚ್.ಸಿ.ಮಹದೇವಪ್ಪ ಅವರು, ಸಿಎಂ ರಾಜೀನಾಮೆ ಕೇಳಲು ಇವರ್ಯಾರು.? ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡಿದೆ. ವಿಪಕ್ಷಗಳನ್ನು ಗುರಿಯಾಗಿಸಿಕೊಂಡು ಐಟಿ ಹಾಗೂ ಸಿಬಿಐ ದಾಳಿ ನಡೆಸುತ್ತಿದೆ. ತನಿಖಾ ಸಂಸ್ಥೆಗಳು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ವರ್ತಿಸುತ್ತಿವೆ. ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಲ್ಲ. ಸಿಎಂ ರಾಜೀನಾಮೆ ಕೇಳಲು ಬಿಜೆಪಿಯವರಿಗೆ ಯಾವುದೇ ನೈತಿಕತೆ ಇಲ್ಲ ಎಂದು ಕಿಡಿಕಾರಿದರು.

 

 

Tags: