ಬೆಂಗಳೂರು: ಅತ್ಯಾಚಾರದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿರುವ ಶಾಸಕ ಮುನಿರತ್ನ ಅವರ ಬೆಂಗಳೂರಿನ ವೈಯಾಲಿಕಾವಲ್ ನಿವಾಸ ಹಾಗೂ ಕಚೇರಿ ಮೇಲೆ ಎಸ್‌ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ಮಾಡಿದ್ದಾರೆ.
ಎಸಿಪಿ ಅಧಿಕಾರಿ ಕವಿತಾ ನೇತೃತ್ವದಲ್ಲಿ ಇಂದು ಮುಂಜಾನೆ ದಾಳಿ ಮಾಡಿದ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಶಾಸಕ ಮುನಿರತ್ನ ಅವರನ್ನು ಜಾತಿ ನಿಂದನೆ ಮತ್ತು ಜೀವ ಬೆದರಿಕೆ ಆರೋಪದಲ್ಲಿ ಬಂಧಿಸಲಾಗಿತ್ತು. ಇದೀಗ ಅವರು ಆತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಎಸ್‌ಐಟಿ ಅಧಿಕಾರಿಗಳು ನಿರ್ಧರಿಸಿದ್ದು, ವೈಯಾಲಿಕಾವಲ್ ನಿವಾಸ ಸೇರಿದಂತೆ ಒಟ್ಟು 15 ಕಡೆಗಳಲ್ಲಿ ಎಫ್‌ಎಸ್‌ಎಲ್ ತಂಡದೊಂದಿಗೆ ದಾಳಿ ನಡೆಸಿದ್ದಾರೆ.