Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಮೈಸೂರು ದಸರಾ ಕ್ರೀಡಾಕೂಟ ಉದ್ಘಾಟನೆಗೆ ಆಗಮಿಸಲಿರುವ ಹರ್ಮನ್‌ ಪ್ರೀತ್‌ ಸಿಂಗ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ಮೈಸೂರಿನಲ್ಲಿ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ದಸರಾ ಸಂಭ್ರಮಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗಿದ್ದು, ಎಲ್ಲಾ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ ನಡೆಯುವಂತೆ ರಾಜ್ಯ ಸರ್ಕಾರ ಹಾಗೂ ಮೈಸೂರು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಈ ಬೆನ್ನಲ್ಲೇ ಈ ಬಾರಿಯ ದಸರಾ ಕ್ರೀಡಾಕೂಟವು ಅಕ್ಟೋಬರ್.‌3 ರಿಂದ 6ರವರೆಗೆ ನಡೆಯಲಿದೆ.

ಈ ಕ್ರೀಡಾಕೂಟಕ್ಕೆ ಪ್ಯಾರಿಸ್‌ ಒಲಂಪಿಕ್ಸ್‌ನ ಕಂಚಿನ ಪದಕ ವಿಜೇತ ಭಾರತ ಹಾಕಿ ತಂಡದ ನಾಯಕ ಹರ್ಮನ್‌ ಪ್ರೀತ್‌ ಸಿಂಗ್‌ ಅವರು ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.

ಅಕ್ಟೋಬರ್‌.3ರಂದು ಮಧ್ಯಾಹ್ನ 4.30ಕ್ಕೆ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ದಸರಾ ಕ್ರೀಡಾಕೂಟವನ್ನು ಉದ್ಘಾಟನೆ ಮಾಡಲಿದ್ದಾರೆ.

ಈ ವೇಳೆ ಹರ್ಮನ್‌ ಪ್ರೀತ್‌ ಸಿಂಗ್‌ ಅವರು ಕೂಡ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದು, ಇವರ ಜೊತೆಗೆ ರಾಜ್ಯ ಸರ್ಕಾರದ ಹಲವು ಸಚಿವರು ಭಾಗಿಯಾಗಲಿದ್ದಾರೆ ಎಂಬ ಮಾಹಿತಿ ಹೊರಬಂದಿದೆ.

 

Tags: