Mysore
21
overcast clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ದಸರಾ ಜಂಬೂಸವಾರಿ ದಿನದಂದು ಪೊಲೀಸರ ಹದ್ದಿನಕಣ್ಣು

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ದಸರಾದ ಪ್ರಮುಖ ಆಕರ್ಷಣೆ ಜಂಬೂಸವಾರಿ ದಿನ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಟ್ಟೆಚ್ಚರ ವಹಿಸಲಿದ್ದಾರೆ.

ಈ ಬಾರಿಯ ದಸರೆಗೆ 20 ಸಾವಿರಕ್ಕಿಂತ ಹೆಚ್ಚಿನ ಪ್ರವಾಸಿಗರು ಬರಬಹುದೆಂದು ಅಂದಾಜು ಮಾಡಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳುವ ಸವಾಲು ಪೊಲೀಸ್‌ ಇಲಾಖೆಗೆ ಇದೆ.

ಇದೆಲ್ಲವನ್ನು ನಿಭಾಯಿಸಿಕೊಂಡು ಹೋಗಲು ಹೆಚ್ಚುವರಿ ಪೊಲೀಸ್‌ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಒದಗಿಸಬೇಕು ಎಂದು ನಗರ ಪೊಲೀಸ್‌ ಆಯುಕ್ತೆ ಸೀಮಾ ಲಾಟ್ಕರ್‌ ಅವರು, ಮೇಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಬಾರಿಯ ದಸರಾ ಕಾರ್ಯಕ್ರಮಗಳ ಸಾಲಿಗೆ ಡ್ರೋನ್‌ ಶೋ ಸೇರಿಕೊಂಡಿರುವ ಹಿನ್ನೆಲೆಯಲ್ಲಿ ಅದಕ್ಕೂ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವ ನಿರೀಕ್ಷೆಯಿದೆ. ಹೀಗಾಗಿ ಆ ಕಾರ್ಯಕ್ರಮ ನಡೆಯುವ ಸ್ಥಳಕ್ಕೂ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಬೇಕೆಂದು ಮನವಿ ಮಾಡಲಾಗಿದೆ.

 

Tags: