Mysore
17
clear sky

Social Media

ಶುಕ್ರವಾರ, 12 ಡಿಸೆಂಬರ್ 2025
Light
Dark

ಮತ್ತೊಮ್ಮೆ ಸಿಎಂ ಆಗುವ ಆಸೆ ಬಿಚ್ಚಿಟ್ಟ ಡಿ.ಕೆ.ಶಿವಕುಮಾರ್‌

ರಾಮನಗರ: ನಾನು ರಾಜ್ಯಕ್ಕೆ ಸೇವೆ ಮಾಡಬೇಕು ಎಂದು ದೊಡ್ಡ ಹೋರಾಟ ನಡೆಯುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಮೂಲಕ ಮತ್ತೊಮ್ಮೆ ಸಿಎಂ ಆಗುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ.

ರಾಮನಗರದಲ್ಲಿ ಹಲವು ಅಭಿವೃದ್ಧಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಡಿಕೆಶಿ, ಸಾತನೂರು ಬಳಿ ಜನಸ್ಪಂದನಾ ಸಭೆ ನಡೆಸಿದರು. ಈ ವೇಳೆ ಕ್ಷೇತ್ರದ ಜನರ ಕುಂದುಕೊರತೆ ಆಲಿಸಿ ಕೆಲ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಿದರು.

ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕನಕಪುರ ಜನ ನನಗೆ ಆಶೀರ್ವಾದ ಮಾಡಿದ್ದಾರೆ. ನಾನು ರಾಜ್ಯಕ್ಕೆ ಸೇವೆ ಮಾಡಬೇಕು ಎಂದು ದೊಡ್ಡ ಪ್ರಯತ್ನ ನಡೆಯುತ್ತಿದೆ.  ಈಗ ಮಾತಾಡಿದ್ರೆ ಮಾಧ್ಯಮಗಳು ವಿವಿಧ ರೀತಿಯಲ್ಲಿ ಬಿಂಬಿಸಿ ವರದಿ ಮಾಡುತ್ತವೆ. ನಾನು ಇಲ್ಲಿಗೆ ಶಾಸಕನಾಗಿ ಬಂದಿದ್ದೇನೆ. ನೀವೆಲ್ಲಾ ನಮ್ಮ ಮನೆ ಮಕ್ಕಳು ಎಂದು ಹೇಳುವ ಮೂಲಕ ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ್ದಾರೆ.

 

Tags:
error: Content is protected !!