Mysore
23
haze

Social Media

ಶುಕ್ರವಾರ, 12 ಡಿಸೆಂಬರ್ 2025
Light
Dark

ಅಕ್ಟೋಬರ್‌.3ರಂದು ಸಾಹಿತಿ ಹಂ.ಪ.ನಾಗರಾಜಯ್ಯರಿಂದ ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ ಟ್ವೀಟ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಜಿಲ್ಲಾಡಳಿತ ಸರ್ವ ಸಿದ್ಧತೆ ಮಾಡಿಕೊಂಡಿದ್ದು, ಅಕ್ಟೊಬರ್.‌3ರಂದು ಸಾಹಿತಿ ಹಂ.ಪ.ನಾಗರಾಜಯ್ಯ ಅವರಿಂದ ದಸರಾ ಉದ್ಘಾಟನೆಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ದಸರಾ ಉತ್ಸವವನ್ನು ಜನರ ಉತ್ಸವದಂತೆ ಆಚರಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಅಕ್ಟೋಬರ್.‌3ರಂದು ಚಾಮುಂಡಿ ಬೆಟ್ಟದಲ್ಲಿ ದಸರಾ ಉತ್ಸವಕ್ಕೆ ಚಾಲನೆ ನೀಡಲಾಗುವುದು. ಈ ಬಾರಿ ಹಂ.ಪ.ನಾಗರಾಜಯ್ಯ ಅವರು ದಸರಾ ಉದ್ಘಾಟನೆ ನೆರವೇರಿಸಲಿದ್ದಾರೆ. ಅಂದು ದಸರಾ, ವಸ್ತುಪ್ರದರ್ಶನ, ಕ್ರೀಡಾ ಉತ್ಸವ, ಕುಸ್ತಿ ಪಂದ್ಯಾವಳಿ, ಸಾಂಸ್ಕೃತಿಕ ಕಾರ್ಯಕ್ರಮ, ಸಿನಿಮೋತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ದಸರಾ ಮಹೋತ್ಸವದಲ್ಲಿ ಉತ್ತಮ ರಸ್ತೆ, ವಿದ್ಯುತ್‌ ಅಲಂಕಾರ ಸೇರಿದಂತೆ ಗುಣಮಟ್ಟದ ಸೌಲಭ್ಯಗಳನ್ನು ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದರ ಜೊತೆಗೆ ಮುಖ್ಯವಾಗಿ ಕಾನೂನು ಸುವ್ಯವಸ್ಥೆ ಕುರಿತು ಕಟ್ಟೆಚ್ಚರ ವಹಿಸಲು ನಿರ್ದೇಶನ ನೀಡಲಾಗಿದೆ ಎಂದು ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ.

 

Tags:
error: Content is protected !!