Mysore
19
clear sky

Social Media

ಸೋಮವಾರ, 23 ಡಿಸೆಂಬರ್ 2024
Light
Dark

ಪೊಲೀಸ್‌ ಭದ್ರತೆಯಲ್ಲಿ ಮಹಿಷ ಮಂಡಲೋತ್ಸವ

ಮೈಸೂರು: ದಸರಾ ಮಹೋತ್ಸವದ ಸಂದರ್ಭದಲ್ಲೇ ಆಚರಿಸಲ್ಪಡುವ ಮಹಿಷ ಮಂಡಲೋತ್ಸವವನ್ನು ಪೊಲೀಸ್ ಬಿಗಿ ಭದ್ರತೆಯಲ್ಲಿ ಆಯೋಜಿಸಲಾಗಿದೆ.

ಚಾಮುಂಡಿಬೆಟ್ಟದಲ್ಲಿ ಮಹಿಷಾಸುರನ ಪ್ರತಿಮೆಗೆ ಮಾಲಾರ್ಪಣೆ ಮಾಡಲು ನಿರ್ಬಂಧ ವಿಧಿಸಿ ಪುರಭವನದ ಆವರಣದೊಳಗೆ ನಡೆಯುವ ವೇದಿಕೆ ಕಾರ್ಯ ಕ್ರಮಕ್ಕೆ ಸೀಮಿತಗೊಳಿಸಿ ಅನುಮತಿ ನೀಡಲಾಗಿದೆ.

ಪುರಭವನದ ಆವರಣ ಹೊರತುಪಡಿಸಿ ಉಳಿದೆಲ್ಲಾ ಕಡೆಗಳಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿರುವ ಕಾರಣ ಅದಕ್ಕೆ ತಕ್ಕಂತೆ ಕಾರ್ಯಕ್ರಮ ನಡೆಯಲಿದೆ. ಇಂದು(ಸೆ.29) ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಗಾಂಧಿ ನಗರದ ಉರಿಲಿಂಗ ಪೆದ್ದೀಶ್ವರ ಮಠದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ, ಚಾಮರಾಜನಗರದ ನಳಂದ ಬುದ್ಧವಿಹಾರದ ಬೋಽದತ್ತ ಬಂತೇಜಿ ಉಪಸ್ಥಿತಿಯಲ್ಲಿ ಚಿಂತಕ ಯೋಗೀಶ್ ಮಾಸ್ಟರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಪ್ರಗತಿಪರ ಚಿಂತಕ ಶಿವಸುಂದರ್ ಮುಖ್ಯ ಭಾಷಣ ಮಾಡಲಿದ್ದಾರೆ. ಸಾಹಿತಿ ಪ್ರೊ. ಕೆ. ಎಸ್. ಭಗವಾನ್, ಇತಿಹಾಸ ತಜ್ಞ ಪ್ರೊ. ಪಿ. ವಿ. ನಂಜರಾಜ ಅರಸ್, ಸಿದ್ದಸ್ವಾಮಿ, ಡಾ. ಕೃಷ್ಣಮೂರ್ತಿ ಚಮರಂ ಪಾಲ್ಗೊಳ್ಳಲಿದ್ದಾರೆ. ದಲಿತ ಮತ್ತು ಪ್ರಗತಿಪರ ಸಂಘಟನೆಗಳು, ದಲಿತ ವಿದ್ಯಾರ್ಥಿ ಒಕ್ಕೂಟ, ಸಂಶೋಧಕರ ಸಂಘ ಹಾಗೂ ಅಂಬೇಡ್ಕರ್ ಸಂಘಟನೆಗಳ ಅಧ್ಯಕ್ಷರು, ಮುಖಂಡರು, ಪದಾಽಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

 

Tags: