ಮೈಸೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಆಗ್ರಹಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಮುಡಾ ಮತ್ತು ವಾಲ್ಮೀಕಿ ಹಗರಣದ ಬಗ್ಗೆ ಬಹಳಷ್ಟು ಚರ್ಚೆ ನಡೆದಿದೆ. ಈಗಾಗಲೇ ಎಫ್ಐಆರ್ ಕೂಡ ದಾಖಲಾಗಿದೆ. ಸಿಎಂ ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ. ರಾಜೀನಾಮೆ ಕೊಟ್ಟು ತನಿಖೆಯನ್ನು ಎದುರಿಸಲಿ. ತನಿಖೆಯಲ್ಲಿ ಏನು ವರದಿ ಬರುತ್ತದೆ ಎಂಬುದನ್ನು ನೋಡಿ ಮುಂದುವರಿಯಲಿ ಎಂದು ಆಗ್ರಹಿಸಿದರು.
ಕಾನೂನಿನಡಿ ಎಲ್ಲರೂ ಒಂದೇ. ಯಾರೇ ತಪ್ಪು ಮಾಡಿದ್ದರೂ ಅದು ತಪ್ಪೇ. ಹೀಗಾಗಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕು ಎಂದು ಆಗ್ರಹಿಸಿದರು.