Mysore
25
overcast clouds

Social Media

ಶನಿವಾರ, 11 ಏಪ್ರಿಲ 2026
Light
Dark

ದಶಕ ಪೂರೈಸಿದ ಮನ್‌ ಕಿ ಬಾತ್‌: ಪ್ರಧಾನಿ ನರೇಂದ್ರ ಮೋದಿ ಸಂತಸ

ನವದೆಹಲಿ: ದೇಶದ ಜನರು ಸಕಾರಾತ್ಮಕ ವಿಚಾರಗಳು, ಸಾಧಕರ ಸ್ಪೂರ್ತಿದಾಯಕ ಕಥೆಗಳನ್ನು ಹೆಚ್ಚು ಹೆಚ್ಚು ಇಷ್ಟ ಪಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಮನ್ ಕಿ ಬಾತ್‌ ಕಾರ್ಯಕ್ರಮವು ಹತ್ತು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಂತಸ ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಮನ್‌ ಕಿ ಬಾತ್‌ ಕಾರ್ಯಕ್ರಮವು ಭಾರತದ ಚೈತನ್ಯವನ್ನು ಮತ್ತು ರಾಷ್ಟ್ರದ ಸಾಮೂಹಿಕ ಶಕ್ತಿಯನ್ನು ಪ್ರದರ್ಶಿಸುವ ವಿಶಿಷ್ಟ ವೇದಿಕೆಯಾಗಿದೆ.

ಜನರು ಯಾವಾಗಲೂ ನಕಾರಾತ್ಮಕ ಅಥವಾ ಅತಿರಂಜಿತ ವಿಷಯಗಳಿಗೆ ಮಾತ್ರ ಕಿವಿಗೊಡುತ್ತಾರೆ ಎಂಬ ಭಾವನೆಯಿದೆ. ಆದರೆ ಮನ್‌ ಕಿ ಬಾತ್‌ ಕಾರ್ಯಕ್ರಮ ಅದನ್ನು ಸುಳ್ಳು ಮಾಡಿ ಜನರು ಸಕಾರಾತ್ಮಕ ವಿಷಯಗಳಿಗೂ ಆಸಕ್ತಿ ತೋರಿಸುತ್ತಾರೆ ಎನ್ನುವುದನ್ನು ತೋರಿಸಿಕೊಟ್ಟಿದೆ ಎಂದು ಹೇಳಿದರು.

ಇನ್ನು ಗಾಂಧಿ ಜಯಂತಿಯಂದು ಆರಂಭಿಸಿದ್ದ ಸ್ವಚ್ಛ ಭಾರತ್‌ ಯೋಜನೆ ಸಹ 10 ವರ್ಷ ಪೂರೈಸಿದ್ದು, ಅಭೂತಪೂರ್ವ ಯಶಸ್ಸು ಕಂಡಿದೆ. ಇದು ಮಹಾತ್ಮ ಗಾಂಧಿ ಅವರಿಗೆ ಸಲ್ಲಿಸಿದ ನಮನವಾಗಿದೆ.

Tags:
error: Content is protected !!