ಬೆಂಗಳೂರು: ಸಿನಿಮಾ ರಂಗದಲ್ಲಿ ಶ್ರೇಷ್ಠ ಸಾಧನೆ ಮಾಡಿದವರಿಗೆ ನೀಡುವ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಹಿಂದಿ ಚಿತ್ರರಂಗದ ಹಿರಿಯ ನಟ ಮಿಥುನ್ ಚಕ್ರವರ್ತಿ ಭಾಜನರಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಅವರು, ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿರುವ ಹಿಂದಿ ಚಿತ್ರರಂಗದ ಹಿರಿಯ ನಟ ಮಿಥುನ್ ಚಕ್ರವರ್ತಿ ಅವರಿಗೆ ಅಭಿನಂದನೆಗಳು.
ತಮ್ಮ ಮನೋಜ್ಞ ಅಭಿನಯ, ಅಮೋಘ ನೃತ್ಯದ ಮೂಲಕ ಹಲವು ದಶಕಗಳ ಕಾಲ ಸಿನಿಪ್ರಿಯರನ್ನು ರಂಜಿಸಿದ ಮಿಥುನ್ ಚಕ್ರವರ್ತಿ ಈ ಗೌರವಕ್ಕೆ ಅತ್ಯಂತ ಅರ್ಹರು.
ಮಿಥುನ್ ಚಕ್ರವರ್ತಿ ಅವರ ಜೀವನ ಸಾಧನೆ ಯುವ ನಟ ಹಾಗೂ ನಟಿಯರಿಗೆ ಪ್ರೇರಣೆಯಾಗಲಿ ಎಂದು ಹಾರೈಸುತ್ತೇನೆ ಎಂದು ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ.