Mysore
17
scattered clouds

Social Media

ಸೋಮವಾರ, 12 ಜನವರಿ 2026
Light
Dark

ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಅನಿವಾರ್ಯ: ವಿಜಯೇಂದ್ರ ಆಗ್ರಹ

ಬೆಂಗಳೂರು: ಮೈಸೂರು ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ಹಾಗಾಗಿ ಅವರು ರಾಜೀನಾಮೆ ನೀಡುವುದು ಅನಿವಾರ್ಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುಡಾ ಹಗರಣ ಹಾಗೂ ವಾಲ್ಮೀಕಿ ಹಗರಣದಿಂದ ರಾಜ್ಯದ ಜನತೆಗೆ ತುಂಬಾ ಅನ್ಯಾಯವಾಗಿದೆ. ಆದ್ದರಿಂದ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ಅನಿವಾರ್ಯತೆ ಬಂದಾಗಿದೆ.

ಮುಡಾ ಹಗರಣಲ್ಲಿ ಸಿದ್ದರಾಮಯ್ಯ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ನಮ್ಮ ಮೈಸೂರು ಪಾದಯಾತ್ರೆ ಯಶಸ್ವಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಮುಡಾ ಹಗರಣಲ್ಲಿ ಸಿದ್ದರಾಮಯ್ಯ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ನಮ್ಮ ಮೈಸೂರು ಪಾದಯಾತ್ರೆ ಯಶಸ್ವಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಇನ್ನು ಈ ಎರಡು ಹಗರಣಗಳು ಸಿಬಿಐನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಕಾಂಗ್ರೆಸ್‌ ವರಿಷ್ಠರಾದ ಮಲ್ಲಿಕಾರ್ಜುನ ಖರ್ಗೆಯವರೇ ಈ ಹಗರಣದ ಬಗ್ಗೆ ಮಾತನಾಡಿದ್ದಾರೆ. ಸಿಎಂ ಸಿದ್ದರಾಮಯ್ಯರ ರಾಜೀನಾಮೆ ಅನಿವಾರ್ಯವಾಗಿದೆ ಎಂದರು.

 

Tags:
error: Content is protected !!