Mysore
22
overcast clouds

Social Media

ಮಂಗಳವಾರ, 28 ಏಪ್ರಿಲ 2026
Light
Dark

ಬೆಳಗಾವಿ ಜಿಲ್ಲೆಯನ್ನು ವಿಭಾಗಿಸುವುದು ಒಳ್ಳೆಯದು: ಸಂಸದ ಜಗದೀಶ್‌ ಶೆಟ್ಟರ್‌

ಹುಬ್ಬಳ್ಳಿ: ಬೆಳಗಾವಿ ಜಿಲ್ಲೆಯನ್ನು ಇಬ್ಬಾಗ ಮಾಡಿ ಪ್ರತ್ಯೇಕ ಜಿಲ್ಲೆಗಳನ್ನು ಮಾಡಬೇಕು. ಇದಕ್ಕೆ ನಮ್ಮ ಅಭ್ಯಂತರವಿಲ್ಲ ಎಂದು ಸಂಸದ ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ.

ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಆಡಳಿತಯಂತ್ರ ಸರಿಯಾಗಿ ಇರಬೇಕೆಂದರೆ ಜಿಲ್ಲೆಗಳು, ತಾಲ್ಲೂಕು ಚಿಕ್ಕ ಚಿಕ್ಕದಾಗಿರಬೇಕು. ಬೆಳಗಾವಿಯು ಇಬ್ಬಾಗವಾಗಿ ಪ್ರತ್ಯೇಕ ಜಿಲ್ಲೆಯಾಗಬೇಕು. ಇದಕ್ಕೆ ನಮ್ಮದೇನು ಅಭ್ಯಂತರವಿಲ್ಲ ಎಂದರು.

ಬೆಳಗಾವಿ ಜಿಲ್ಲೆಯ ವರ್ಗೀಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯನ್ನು ವಿಭಾಗಿಸುವುದು ಒಳ್ಳೆಯದು. ಆದರೆ ಅದನ್ನು ವೈಜ್ಞಾನಿಕವಾಗಿ ವಿಭಾಗಿಸಬೇಕು ಎಂದು ಹೇಳಿದರು.

Tags:
error: Content is protected !!