Mysore
32
scattered clouds

Social Media

ಮಂಗಳವಾರ, 11 ಮಾರ್ಚ್ 2025
Light
Dark

ಅಕ್ಟೋಬರ್.‌4ರಿಂದ ಶ್ರೀರಂಗಪಟ್ಟಣ ದಸರಾ ಮಹೋತ್ಸವ

ಮಂಡ್ಯ: ಅಕ್ಟೋಬರ್.‌4ರಿಂದ 7ರವರೆಗೆ ಶ್ರೀರಂಗಪಟ್ಟಣದಲ್ಲಿ ನಾಡಹಬ್ಬ 414ನೇ ದಸರಾವನ್ನು ಆಯೋಜಿಸಲಾಗಿದೆ.

ಅಕ್ಟೋಬರ್.‌4 ರಂದು ಮಧ್ಯಾಹ್ನ 12.30ಕ್ಕೆ ನಂದಿಧ್ವಜ ಪೂಜೆ ನೆರವೇರಿಸಲಾಗುವುದು. ಮಧ್ಯಾಹ್ನ 2.30ರಿಂದ 3 ಗಂಟೆಯವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ನಾಡದೇವರೆ ಚಾಮುಂಡೇಶ್ವರಿ ದೇವಿಗೆ ಅಗ್ರಪೂಜೆ ಹಾಗೂ ಜಂಬೂಸವಾರಿ ಮೆರವಣಿಗೆಗೆ ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಅವರು ಚಾಲನೆ ನೀಡಲಿದ್ದಾರೆ.

ಅಂದು ಸಂಜೆ ಶ್ರೀರಂಗನಾಥಸ್ವಾಮಿ ದೇವಾಲಯದ ಆವರಣದ ಶ್ರೀರಂಗ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭ ನಡೆಯಲಿದೆ.

ಸಾಂಸ್ಕೃತಿಕ ದಸರಾ ಕಾರ್ಯಕ್ರಮದಲ್ಲಿ ರಾಜ್ಯ ಸಚಿವರು ಹಾಗೂ ಶಾಸಕರು ಸೇರಿದಂತೆ ಹಲವು ಗಣ್ಯರು ಭಾಗಿಯಾಗಲಿದ್ದಾರೆ.

ಅಕ್ಟೋಬರ್‌.7ರವರೆಗೂ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಇದಕ್ಕೆ ಮಂಡ್ಯ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ.

 

Tags: