Mysore
21
broken clouds

Social Media

ಸೋಮವಾರ, 30 ಡಿಸೆಂಬರ್ 2024
Light
Dark

ಮಡಿಕೇರಿ ದಸರಾಗೆ 1.50 ಕೋಟಿ ರೂ ಅನುದಾನ

ಮಡಿಕೇರಿ: ಐತಿಹಾಸಿಕ ಮಂಜಿನ ನಗರಿ ಮಡಿಕೇರಿ ದಸರಾ ಚಾಲನೆಗೆ ಇನ್ನೊಂದೆ ದಿನ ಬಾಕಿ ಇರುವಾಗಲೇ ರಾಜ್ಯ ಸರ್ಕಾರ 1.50 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಳಿಸಿದೆ.

ಮಡಿಕೇರಿ ದಸರಾಗೆ 1.50 ಕೋಟಿ ರೂ ಹಾಗೂ ಗೋಣಿಕೊಪ್ಪ ದಸರಾಗೆ 75 ಲಕ್ಷ ರೂ ಅನುದಾನ ಬಿಡುಗಡೆ ಮಾಡಿದ್ದು, ಈ ಬಾರಿ ಅದ್ಧೂರಿಯಾಗಿ ದಸರಾ ನಡೆಯುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ.

ನಾಳೆ ಮಡಿಕೇರಿ ನಗರದ ನಾಲ್ಕು ಶಕ್ತಿ ದೇವತೆಗಳ ಕರಗ ಮಹೋತ್ಸವಕ್ಕೆ ಚಾಲನೆ ನೀಡಲಾಗುತ್ತದೆ. ಇದರ ಜೊತೆಗೆ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ವೇದಿಕೆ ಸಿದ್ಧಗೊಳ್ಳುತ್ತಿದ್ದು, ಮುಂದಿನ 10 ದಿನಗಳ ಬಳಿಕ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಮಡಿಕೇರಿ ದಸರಾಗೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗಿಯಾಗಲಿರುವ ಹಿನ್ನೆಲೆಯಲ್ಲಿ ಜನತೆಗೆ ಬೇಕಾದ ಅಗತ್ಯ ಸೌಲಭ್ಯವನ್ನು ಒದಗಿಸಲು ಜಿಲ್ಲಾಡಳಿತ ತಯಾರಿ ಮಾಡಿಕೊಂಡಿದೆ.

Tags: