Mysore
20
overcast clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಗೆ ಖ್ಯಾತ ಶಹನಾಯಿ ವಾದಕ ಪಂಡಿತ್ ಬಸವರಾಜ ಭಜಂತ್ರಿ ಆಯ್ಕೆ…

ಮೈಸೂರು: ಮೈಸೂರು ದಸರಾ ಉದ್ಘಾಟನಾ ಸಂದರ್ಭದಲ್ಲಿ ಪ್ರತಿ ವರ್ಷವೂ ಅರಮನೆ ಆವರಣದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಮಾಡುವುದು ಸಂಪ್ರದಾಯ.

ಹೀಗಾಗಿ, ಈ ವರ್ಷ ಈ ಪ್ರತಿಷ್ಠಿತ ಪ್ರಶಸ್ತಿಗೆ ಹಾವೇರಿ ಜಿಲ್ಲೆಯ ಖ್ಯಾತ ಶಹನಾಯಿ ವಾದಕ ಪಂಡಿತ್ ಬಸವರಾಜ ಭಜಂತ್ರಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್ ತಂಗಡಗಿ ಹೇಳಿದ್ದಾರೆ.

ಪಂಡಿತ್ ಎಂ . ವೆಂಕಟೇಶ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ರಚಿಸಲಾದ ಆಯ್ಕೆ ಸಮಿತಿ ಇವರನ್ನು ಆಯ್ಕೆ ಮಾಡಿದೆ.
ನಾಳೆ ಸಂಜೆ ಮೈಸೂರು ಅರಮನೆ ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಈ ಪ್ರತಿಷ್ಠಿತ ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ಪಂಡಿತ್ ಬಸವರಾಜ ಭಜಂತ್ರಿ ಅವರಿಗೆ ಪ್ರದಾನ ಮಾಡಲಿದ್ದಾರೆ ಎಂದು ಅವರು ತಿಳಿಸಿದರು.

ಈ ಪ್ರಶಸ್ತಿಯು 5 ಲಕ್ಷ ರೂಪಾಯಿ ನಗದು, ಪ್ರಶಸ್ತಿಫಲಕ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.

Tags: