Mysore
23
broken clouds

Social Media

ಶನಿವಾರ, 21 ಡಿಸೆಂಬರ್ 2024
Light
Dark

ಪ್ರತಿಯೊಬ್ಬರು ತಾಯಿಯ ಹೆಸರಿನಲ್ಲಿ ಸಸಿ ನೆಟ್ಟು, ಪ್ರಕೃತಿಗೆ ಕೊಡುಗೆ ನೀಡಲಿ

ಮೈಸೂರಿನಲ್ಲಿ ನಡೆದ ಸ್ವಚ್ಚತಾ ಹೀ ಸೇವಾ ಅಭಿಯಾನದಲ್ಲಿ ಸಂಸದ ಯದುವೀರ್ ಒಡೆಯರ್ ಸಲಹೆ

ಮೈಸೂರು: ಗಾಂಧೀಜಿಯವರ ಕನಸಿನಂತೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಶಯದೊಂದಿಗೆ ಸೆಪ್ಟೆಂಬರ್ 17 ರಿಂದ “ಸ್ವಚ್ಛತಾ ಹೀ ಸೇವಾ” ಅಭಿಯಾನ ದೇಶಾದ್ಯಂತ ನಡೆಯುತ್ತಿದ್ದು, ಗಾಂಧಿ ಜಯಂತಿ ಅಂಗವಾಗಿ ಇಂದು ಮೈಸೂರಿನ ಮಾನಸ ಗಂಗೋತ್ರಿಯ ಬಯಲು ರಂಗ ಮಂದಿರದಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ನೇತೃತ್ವದಲ್ಲಿ , ಕೇಂದ್ರ ಸಂವಹನ ಇಲಾಖೆ, ಮೈಸೂರು ವತಿಯಿಂದ ಶ್ರಮದಾನ ನೆರವೇರಿತು.

ಮೈಸೂರು ಮಹಾನಗರ ಪಾಲಿಕೆ, ಜಯದೇವ ಆಸ್ಪತ್ರೆ, ಶೇಷಾದ್ರಿಪುರಂ ಕಾಲೇಜಿನ ಎನ್ಎಸ್ಎಸ್ ಘಟಕದ ಸಹಯೋಗದಲ್ಲಿ ಸ್ವಚ್ಛತಾ ಅಭಿಯಾನ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಂಸದರು, ದೇಶಾದ್ಯಂತ ನಡೆಯುತ್ತಿರುವ ಸ್ವಚ್ಛತಾ ಹೀ ಸೇವಾ ಅಭಿಯಾನವು ಮೈಸೂರಿನಲ್ಲೂ ಯಶಸ್ವಿಯಾಗಿ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ವಿವಿಧ ಕಾರ್ಯ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಯೋಜನೆ ಇದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸ್ವಚ್ಛತೆ ಮತ್ತು ಸ್ವಚ್ಛತಾ ಹೀ ಸೇವೆ ಅಭಿಯಾನದ ಕುರಿತು ಜನರಿಗೆ ಜಾಗೃತಿ ಮೂಡಿಸಲಾಯಿತು.

ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಮತ್ತೊಂದು ಅಭಿಯಾನವಾದ, “ತಾಯಿಯ ಹೆಸರಿನಲ್ಲಿ ಒಂದು ಮರ” (ಏಕ್ ಪೇಡ್ ಮಾ ಕೇ ನಾಮ್) ಪ್ರಯುಕ್ತ ಸಂಸದರು ಮಾನಸ ಗಂಗೋತ್ರಿ ಆವರಣದಲ್ಲಿ ಸಪೋಟ ಹಾಗೂ ಸೀಬೆ ಸಸಿ ನೆಟ್ಟರು.

ಇದೇ ರೀತಿಯಾಗಿ ಪ್ರತಿಯೊಬ್ಬರು ತಮ್ಮ ತಾಯಿಯ ಹೆಸರಿನಲ್ಲಿ ಒಂದು ಸಸಿ ನೆಟ್ಟು, ಅದು ಮರವಾಗಿ ಪ್ರಕೃತಿಗೆ ಮಾನವನ ಕೊಡುಗೆಯಾಗಲಿ ಎಂದು ಸಂಸದರು ಕರೆ ನೀಡಿದರು.

ಈ ಸಂದರ್ಭದಲ್ಲಿ ಕೇಂದ್ರ ಸಂವಹನ ಇಲಾಖೆ, ಮೈಸೂರಿನ ಕ್ಷೇತ್ರ ಪ್ರಚಾರಾಧಿಕಾರಿ ಶೃತಿ ಎಸ್.ಟಿ., ದರ್ಶನ್, ಮೈಸೂರು ಮಹಾನಗರ ಪಾಲಿಕೆಯ ಹಿರಿಯ ಆರೋಗ್ಯ ನಿರೀಕ್ಷಕರು ಪ್ರಭಾಕರ್, ಆರೋಗ್ಯ ನಿರೀಕ್ಷಕರು ಪ್ರಕಾಶ್, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮಧುಕರ್ ಎಂ, ಜಯದೇವ ಆಸ್ಪತ್ರೆಯ ಡಾಕ್ಟರ್ ಪಶುಪತಿ, ಸಾರ್ವಜನಿಕ ಸಂಪರ್ಕಾಧಿಕಾರಿ ವಾಣಿ ಮೋಹನ್ ಹರೀಶ್ ಕುಮಾರ್ ಆಫೀಸರ್ ಹಾಗೂ ಜಯದೇವ ಆಸ್ಪತ್ರೆಯ ಆಡಳಿತ ಮತ್ತು ಸಿಬ್ಬಂದಿ ವರ್ಗ, ಶೇಷಾದ್ರಿಪುರಂ ಕಾಲೇಜಿನ ಎನ್ಎಸ್ಎಸ್ ಅಧಿಕಾರಿ ರಾಘವೇಂದ್ರ, ಸ್ವಯಂ ಸೇವಕರು ಮತ್ತು ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

Tags: