Mysore
25
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ರಕ್ತದಾನ ಪ್ರೋತ್ಸಾಹ ಅತ್ಯವಶ್ಯಕ: ಮಲ್ಲಿಕಾರ್ಜುನ ಸ್ವಾಮಿ

ಹನೂರು: ವಿಶ್ವದಲ್ಲಿಯೇ ಅತಿ ಹೆಚ್ಚು ರಕ್ತದ ಕೊರತೆಯಿಂದ ಬಳಲುತ್ತಿರುವವರು ನಮ್ಮ ದೇಶದಲ್ಲಿದ್ದಾರೆ. ಸಮಯಕ್ಕೆ ರಕ್ತ ಸಿಗದ ಕಾರಣ ಪ್ರತಿ ವರ್ಷ ವಿವಿಧ ಕಾಯಿಲೆಗಳಿಂದ ಬಳತಿರುವ ರೋಗಿಗಳು ಸಾವನ್ನಪ್ಪುತ್ತಿದ್ದಾರೆ ಆದ್ದರಿಂದ ಆ ಜೀವಗಳನ್ನು ಉಳಿಸಲು ರಕ್ತದಾನವನ್ನು ಪ್ರೋತ್ಸಾಹಿಸಬೇಕಿದೆ ಎಂದು ಸಾಲೂರು ಬೃಹನ್ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ತಿಳಿಸಿದರು.

ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಶ್ರೀ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ, ಶ್ರೀ ಸಾಲೂರು ಬೃಹನ್ ಮಠ, ಭಾರತೀಯ ರೆಡ್ ಕ್ರಾಸ್ ಸೊಸೈಟಿ ಮತ್ತು ಲಯನ್ಸ್ ಕ್ಲಬ್, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಜಿಲ್ಲಾ ಘಟಕ ಮಹಿಳಾ ಜಿಲ್ಲಾ ಘಟಕದ ಸಂಯುಕ್ತಾಶ್ರಯದಲ್ಲಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಹಮ್ಮಿಕೊಳ್ಳಲಾಗಿದ್ದ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಅಪಘಾತಗಳು ಹೆಚ್ಚಾಗುತ್ತಿದೆ, ಅಪಘಾತಗಳಲ್ಲಿ ಗಾಯಗೊಂಡವರಿಗೆ, ಶಸ್ತ್ರ ಚಿಕಿತ್ಸೆಗೆ ಒಳಗಾದವರಿಗೆ, ಮಾರಣಾಂತಿಕ ಕಾಯಿಲೆಗಳಿಂದ ಬಳತ್ತಿರುವ ರೋಗಿಗಳಿಗೆ ಯಾವುದೇ ಪರಿಸ್ಥಿತಿಯಲ್ಲಿ ರಕ್ತದ ಅವಶ್ಯಕತೆ ಇರುತ್ತದೆ. ಆದರೆ ಅನೇಕ ಜನರು ರಕ್ತದಾನ ಮಾಡುವುದರಿಂದ ದುರ್ಬಲರಾಗುತ್ತೇವೆ ಎಂದು ಭಾವಿಸುತ್ತಾರೆ . ಆದರೆ ಅದು ತಾತ್ಕಾಲಿಕವಾಗಿ ಮಾತ್ರ ರಕ್ತದಾನ ಮಾಡುವುದರಿಂದ ನಮ್ಮ ದೇಹಕ್ಕೆ ವಿವಿಧ ರೀತಿಯ ಆರೋಗ್ಯ ಪ್ರಯೋಜನಗಳಿವೆ. ನಾವು ರಕ್ತದಾನ ಮಾಡುವುದರಿಂದ ಮೂರು ಜೀವಗಳನ್ನು ಉಳಿಸಬಹುದು, ರಕ್ತದಾನ ಮಾಡುವುದರಿಂದ ಕೇವಲ ಸ್ವೀಕರಿಸಿದವರಿಗೆ ಮಾತ್ರ ಪ್ರಯೋಜನವಾಗುವುದಿಲ್ಲ ರಕ್ತದಾನ ಮಾಡಿದವರಿಗೂ ಹೆಚ್ಚು ಸಹಾಯವಾಗುತ್ತದೆ, ರಕ್ತದಾನ ಮಾಡುವವರಿಗೆ ಒತ್ತಡ ಕಡಿಮೆಯಾಗುತ್ತದೆ ಭಾವನಾತ್ಮಕ ಆರೋಗ್ಯ ಸುಧಾರಣೆಯಾಗುತ್ತದೆ ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ರಕ್ತದಾನ ಮಾಡಲು ಮುಂದಾಗಬೇಕು ಎಂದು ಸಲಹೆ ನೀಡಿದರು.

ರಕ್ತದಾನ ಮಾಡುವುದರಿಂದ ದಾನಿಯ ರಕ್ತದಲ್ಲಿ ಹೊಸ ರಕ್ತ ಉತ್ಪತ್ತಿಯಾಗಲು ಪ್ರಚೋದನೆ ಸಿಗುತ್ತದೆ, ದೇಹದಲ್ಲಿ ಹೊಸ ರಕ್ತ ಚಾಲನೆ ಯಿಂದ ಜ್ಞಾಪಕ ಶಕ್ತಿ ವೃದ್ಧಿಯಾಗುತ್ತದೆ ದೇಹದಲ್ಲಿ ಕೊಬ್ಬಿನ ಅಂಶ ಕಡಿಮೆ ಮಾಡಲು, ಹೃದಯಘಾತವನ್ನು ಶೇಕಡ 80ಕ್ಕಿಂತಲೂ ಜಾಸ್ತಿ ತಡೆಯಲು, ರಕ್ತದ ಒತ್ತಡ ಇತರೆ ಕೆಲವು ರೋಗಗಳನ್ನು ತಡೆಗಟ್ಟಲು ಎಲ್ಲಾಕ್ಕಿಂತ ಮಿಗಿಲಾಗಿ ಒಂದು ಜೀವ ಉಳಿಸಲು ರಕ್ತದಾನ ಅವಶ್ಯಕವಾಗಿದೆ ಎಂದರು.

ಯುವ ಮುಖಂಡ ವಿಶ್ವ ಮಾತನಾಡಿ ಮಲೆ ಮಾದೇಶ್ವರ ಬೆಟ್ಟದಲ್ಲಿ ಹಮ್ಮಿಕೊಳ್ಳಲಾಗಿದ್ದ ರಕ್ತದಾನ ಶಿಬಿರಕ್ಕೆ ಆಗಮಿಸಿದ್ದ ವೈದ್ಯಾಧಿಕಾರಿಗಳು, ಸಿಬ್ಬಂದಿಗಳಿಗೆ ವಾಸ್ತವ್ಯಕ್ಕೆ ವಸತಿ ವ್ಯವಸ್ಥೆ, ರಕ್ತದಾನ ಮಾಡಿದ ದಾನಿಗಳಿಗೆ ನೇರ ದರ್ಶನ ಸೇರಿದಂತೆ ಎಲ್ಲಾ ರೀತಿಯ ನೆರವು ಕಲ್ಪಿಸುವ ಮೂಲಕ ಪ್ರಾಧಿಕಾರದ ಕಾರ್ಯದರ್ಶಿ ರಘು ರವರು ಸಹಕಾರ ನೀಡಿದ್ದಾರೆ. ಇವರ ಸಹಕಾರದಿಂದ ರಕ್ತದಾನ ಶಿಬಿರ ಯಶಸ್ವಿಯಾಗಿದೆ ಎಂದರು.

ರಕ್ತದಾನ ಶಿಬಿರದಲ್ಲಿ 30 ಜನರು ರಕ್ತದಾನ ಮಾಡಿದ್ದಾರೆ.

ಶಿಬಿರದಲ್ಲಿ ಬಸವರಾಜೇಂದ್ರ ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ. ಬಸವರಾಜೇಂದ್ರ, ಶ್ವೇತಾ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಮೂಡ್ಲುಪುರ ನಂದೀಶ್, ನಿರ್ದೇಶಕರುಗಳಾದ ಕೆಎಮ್ ಬಸವರಾಜಪ್ಪ, ಅನುಪಮಾ, ಶೋಭಾ, ನಿರಂಜನ್ ಮೂರ್ತಿ ಹಾಗೂ ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಹಾಜರಿದ್ದರು.

Tags: