Mysore
28
clear sky

Social Media

ಭಾನುವಾರ, 04 ಜನವರಿ 2026
Light
Dark

ತಿರುಪತಿ ಲಡ್ಡು ಪ್ರಕರಣ: ಎಸ್‌ಐಟಿ ತನಿಖೆಗೆ ಸುಪ್ರೀಂಕೋರ್ಟ್‌ ಆದೇಶ

ನವದೆಹಲಿ: ಆಂಧ್ರದ ತಿರುಮತಿ ತಿರುಮಲ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡುವ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಇದೀಗ ಸುಪ್ರೀಂಕೋರ್ಟ್‌ ವಿಚಾರಣೆ ನಡೆಸಿ ಎಸ್‌ಐಟಿ ತನಿಖೆಗೆ ಆದೇಶ ನೀಡಿದೆ.

ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳಾದ ಬಿ.ಆರ್‌.ಗವಾಯಿ ಹಾಗೂ ಕೆ.ವಿ.ವಿಶ್ವನಾಥ್‌ ಅವರ ಪೀಠವು ಇಂದು ಎಸ್‌ಐಟಿ ತನಿಖೆ ನಡೆಸುವಂತೆ ಸೂಚಿಸಿದ್ದು, ಲಡ್ಡು ಪ್ರಕರಣ ವಿಚಾರದಲ್ಲಿ ರಾಜಕೀಯ ಬಯಸುವುದಿಲ್ಲ. ಈ ವಿಚಾರ ಪ್ರಪಂಚದಾದ್ಯಂತ ಲಕ್ಷಾಂತರ ಜನರ ನಂಬಿಕೆಯ ವಿಷಯವಾಗಿದೆ ಎಂದು ಗಂಭೀರವಾಗಿ ತಿಳಿಸಿದೆ. ಈ ಎಸ್‌ಐಟಿ ತನಿಖೆಯಲ್ಲಿ ಇಬ್ಬರು ಸಿಬಿಐ ಅಧಿಕಾರಿಗಳು, ಇಬ್ಬರು ರಾಜ್ಯ ಪೊಲೀಸ್‌ ಅಧಿಕಾರಿಗಳು, ಭಾರತೀಯ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಪ್ರಾಧಿಕಾರದ ಹಿರಿಯ ಅಧಿಕಾರಗಳನ್ನು ಒಳಗೊಂಡಿರುತ್ತದೆ ಎಂದು ತಿಳಿಸಿದೆ.

 

Tags:
error: Content is protected !!