Mysore
21
broken clouds

Social Media

ಸೋಮವಾರ, 17 ಆಗಸ್ಟ್ 2026
Light
Dark

ಶಾಸಕ ಜಿಟಿಡಿ ಹೇಳಿಕೆಯಿಂದ ಬಿಜೆಪಿಗೆ ಯಾವುದೇ ಡ್ಯಾಮೇಜ್‌ ಆಗಲ್ಲ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಪರ ಮಾತನಾಡಿದ ಶಾಸಕ ಜಿ.ಟಿ.ದೇವೇಗೌಡರ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಕಿಡಿಕಾರಿದ್ದಾರೆ.

ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಜಿ.ಟಿ.ದೇವೇಗೌಡ ಅವರು ಸಿಎಂ ಸಿದ್ದರಾಮಯ್ಯ ಪರ ಮಾತನಾಡಿದ್ದರು. ಎಫ್‌ಐಆರ್‌ ದಾಖಲಾದ ತಕ್ಷಣ ರಾಜೀನಾಮೆ ಕೊಡುವ ಅವಶ್ಯಕತೆಯಿಲ್ಲ. ಎಫ್‌ಐಆರ್‌ ದಾಖಲಾದವರೆಲ್ಲಾ ರಾಜೀನಾಮೆ ಕೊಟ್ಟಿದ್ದಾರಾ ಎಂದು ಪ್ರಶ್ನೆ ಮಾಡಿದ್ದರು.

ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು, ಕಳೆದ ವಾರವಷ್ಟೇ ಜಿ.ಟಿ.ದೇವೇಗೌಡ ಸಿದ್ದರಾಮಯ್ಯ ವಿರುದ್ಧ ಮಾತನಾಡಿದ್ದರು. ಈಗ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ ಪರ ಮಾತನಾಡಿದ್ದಾರೆ. ಅವರ ಹೇಳಕೆಯಿಂದ ಬಿಜೆಪಿಗೆ ಯಾವುದೇ ಡ್ಯಾಮೇಜ್‌ ಆಗಲ್ಲ ಎಂದರು.

ಇನ್ನು ರಾಜ್ಯ ಸರ್ಕಾರದ ವಿರುದ್ಧ ಸಾಲು ಸಾಲು ಹಗರಣಗಳು ಕೇಳಿಬಂದಿವೆ. ಇಂತಹ ಸಮಯದಲ್ಲಿ ಜಿ.ಟಿ.ದೇವೇಗೌಡರ ಹೇಳಿಕೆ ಸರಿಯಲ್ಲ. ಸ್ಥಾನಮಾನ ಸಿಗದಿದ್ದಕ್ಕೆ ಪಕ್ಷದ ವಿರುದ್ಧ ಮಾತನಾಡಿದ್ದಾರೆ ಎಂದು ಕಿಡಿಕಾರಿದರು.

 

Tags:
error: Content is protected !!