Mysore
26
few clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ನಾನು ಸಿಎಂ ರೇಸ್‌ನಲ್ಲಿ ಇಲ್ಲ: ಸಚಿವ ಎನ್.ಚಲುವರಾಯಸ್ವಾಮಿ

ಮೈಸೂರು: ನಾನು ಮುಖ್ಯಮಂತ್ರಿ ರೇಸ್‌ನಲ್ಲಿ ಇಲ್ಲ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ವಿಪಕ್ಷಗಳು ಆಗ್ರಹಿಸುತ್ತಿರುವ ಬೆನ್ನಲ್ಲೇ ಕಾಂಗ್ರೆಸ್‌ನಲ್ಲೇ ಹಲವು ನಾಯಕರು ಸಿಎಂ ರೇಸ್‌ನಲ್ಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಈ ಬಗ್ಗೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು, ನಾನು ಸಿಎಂ ರೇಸ್‌ನಲ್ಲಿ ಇಲ್ಲ. ಸಿಎಂ ಬದಲಾವಣೆ ಚರ್ಚೆ ಪಕ್ಷದಲ್ಲಿ ನಡೆದಿಲ್ಲ. ಇದೆಲ್ಲಾ ಕೇವಲ ಊಹಾಪೋಹ. ನಮ್ಮ ಸರ್ಕಾರವನ್ನು ಯಾರು ಏನೂ ಮಾಡಕ್ಕಾಗಲ್ಲ. ನಮ್ಮ ಸರ್ಕಾರ ಐದು ವರ್ಷ ಸುಭದ್ರವಾಗಿರಲಿದೆ ಎಂದರು.

ಇನ್ನು ಇಡೀ ದೇಶಕ್ಕೆ ಬುದ್ಧಿ ಹೇಳುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಮ್ಮ ಮಗ ಕುಮಾರಸ್ವಾಮಿಗೆ ಏಕೆ ಬುದ್ಧಿ ಹೇಳುತ್ತಿಲ್ಲ ಎಂದು ಎಚ್‌ಡಿಕೆಗೆ ಟಾಂಗ್‌ ಕೊಟ್ಟರು. ಸಿಎಂ ರಾಜೀನಾಮೆ ಕೇಳುವ ಬದಲು ಕುಮಾರಸ್ವಾಮಿ ಕೈಗಾರಿಕೆ ಅಭಿವೃದ್ಧಿ ಕಡೆ ಗಮನಹರಿಸಲಿ ಎಂದು ಸಲಹೆ ನೀಡಿದರು.

Tags: