Mysore
20
overcast clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ದಸರಾದಲ್ಲಿ ಮುಡಾ ಸೈಟ್‌ ನೋಡುವುದನ್ನು ತಪ್ಪಿಸಿಕೊಳ್ಳಬೇಡಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಟೀಕೆ

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ಹೆಸರು ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾಲುದಾರಿಕೆ ಇದೆ ಎಂದು ಬಿಜೆಪಿ ಆರೋಪಿಸಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹಿಸುತ್ತಿದ್ದು, ಇದೀಗ ರಾಷ್ಟ್ರಮಟ್ಟದಲ್ಲಿ ಧರಣಿ ನಡೆಸಲು ಚಿಂತನೆ ನಡೆಸಿದೆ ಎಂದು ಮೂಲಗಳಿಂದ ಕೇಳಿ ಬಂದಿದೆ.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯೂ ತಮ್ಮ ಎಕ್ಸ್‌ ಖಾತೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದು, ಈ ದಸರಾದಲ್ಲಿ ಐದು ಸಾವಿರ ಕೋಟಿ ಮೌಲ್ಯದ ಅದ್ಭುತವಾದ ಮುಡಾ ಸೈಟ್‌ ಸೀಯಿಂಗ್‌ ಟೂರ್‌ಅನ್ನು ತಪ್ಪಿಸಿಕೊಳ್ಳಬೇಡಿ. ಸೈಟ್‌ ಸೀಯಿಂಗ್‌ನಲ್ಲಿ ನೀವು ಹಿಂದೆಂದು ನೋಡದ ಭ್ರಷ್ಟಾಚಾರವನ್ನು ಹತ್ತಿರದಿಂದ ನೋಡಬಹುದಾಗಿದೆ. ಸೈಟ್‌ ಸೀಯಿಂಗ್‌ಗಾಗಿ ಗೋಲ್ಡ್‌ ಪಾಸ್‌ ಬೇಕೆ? ದಯವಿಟ್ಟು ಸಿಎಂ ಸಿದ್ದರಾಮಯ್ಯ ಅವರನ್ನು ಸಂಪರ್ಕಿಸಿ. ಬಳಿಕ ಸಿದ್ದರಾಮಯ್ಯ ವಾಮಮಾರ್ಗವಾಗಿ ಪ್ರವೇಶಿಸುವವರ ವಿರುದ್ಧ ಕ್ರಮ ಜರುಗಿಸಲಾಗುವುದು. ಇದು ತಮಾಷೆ ಅಲ್ಲ! ರಾಜ್ಯದಲ್ಲಿ ಈಗಾಗಲೇ ಮುಖ್ಯಮಂತ್ರಿಗಳನ್ನು ವಿಚಾರಣೆಗೆ ಒಳಪಡಿಸಿದ್ದೇವೆ ಎಂಬಂತೆ ಪೋಸ್ಟ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಇನ್ನು ರಾಜ್ಯದಲ್ಲಿ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ತೀವ್ರ ಹೋರಾಟ ನಡೆಸಲು ಮುಂದಾಗಿದ್ದಾರೆ. ಅಲ್ಲದೇ ಕೆಲವು ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಚುನಾವಣಾ ಭಾಷಣಗಳ ಸಂದರ್ಭದಲ್ಲಿ ಮುಡಾ ಹಗರಣದ ವಿಚಾರವಾಗಿ ಪ್ರಸ್ತಾಪಿಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

Tags: