Mysore
30
few clouds

Social Media

ಭಾನುವಾರ, 05 ಏಪ್ರಿಲ 2026
Light
Dark

ತುಮಕೂರು ರೈಲು ನಿಲ್ದಾಣ ಮೇಲ್ದರ್ಜೆಗೇರಿಸಲು 88 ಕೋಟಿ ಅನುದಾನ: ಕೇಂದ್ರ ಸಚಿವ ವಿ.ಸೋಮಣ್ಣ

ತುಮಕೂರು: ತುಮಕೂರು ರೈಲ್ವೆ ನಿಲ್ದಾಣವನ್ನು ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಮೇಲ್ದರ್ಜೆಗೇರಿಸಲು 88.41 ಕೋಟಿ ರೂ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ರೈಲ್ವೆ ನಿಲ್ದಾಣವನ್ನು ಸಿದ್ಧಗಂಗಾ ಮಠದ ಮಾದರಿಯ ವಾಸ್ತುಶಿಲ್ಪದ ವಿನ್ಯಾಸದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ.

ಬಹುಮಹಡಿ ಕಟ್ಟಡ, ಸುಸಜ್ಜಿತ ವಾಹನ ನಿಲುಗಡೆ ವ್ಯವಸ್ಥೆ, ಆಗಮನ-ನಿರ್ಗಮನಕ್ಕೆ ಪ್ರತ್ಯೇಕ ದ್ವಾರಗಳು, ಲಿಫ್ಟ್‌ ಜೊತೆಗೆ ವಾಣಿಜ್ಯ ಕಟ್ಟಡ ನಿರ್ಮಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಇನ್ನು ಬೆಂಗಳೂರಿನಿಂದ ತುಮಕೂರು ಕೂಡ ಅತಿ ವೇಗವಾಗಿ ಬೆಳೆಯುತ್ತಿದ್ದು, ಈ ಉದ್ದೇಶದಿಂದಲೇ ರೈಲ್ವೆ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ ಎಂದು ತಿಳಿಸಿದರು.

ಈ ಮೂಲಕ ಸಚಿವ ವಿ.ಸೋಮಣ್ಣ ಅವರು ತಮ್ಮ ಕ್ಷೇತ್ರ ತುಮಕೂರನ್ನು ಅಭಿವೃದ್ಧಿ ಪಡಿಸಬೇಕು ಎಂಬ ಪಣ ತೊಟ್ಟಿದ್ದು, ರೈಲ್ವೆ ಇಲಾಖೆ ಸಚಿವರಾಗಿ ಅನೇಕ ಶ್ರಮ ವಹಿಸುತ್ತಿದ್ದಾರೆ.

Tags:
error: Content is protected !!