ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಗೆ ಇನ್ನೇನು ಕೆಲವೇ ದಿನಗಳು ಬಾಕಿಯಿದೆ.
ಈ ಹಿನ್ನೆಲೆಯಲ್ಲಿ ವಿಜಯದಶಮಿ ದಿನದಂದು ಜರುಗಲಿರುವ ದಸರಾ ಜಂಬೂಸವಾರಿ ಮೆರವಣಿಯನ್ನು ನೋಡಲು ಜನರು ಕಾತುರದಿಂದ ಕಾಯುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಅಕ್ಟೋಬರ್.12ರಂದು ನಡೆಯುವ ಜಂಬೂಸವಾರಿ ಮೆರವಣಿಗೆಯನ್ನು ಹತ್ತಿರದಿಂದ ನೋಡಲು ಹಾಗೂ ಅಂದು ಸಂಜೆ ನಡೆಯುವ ಟಾರ್ಚ್ ಲೈಟ್ ಶೋ ನೋಡಲು ಜನರು ಇನ್ನೂ ಕೂಡ ಪಾಸ್ ಖರೀದಿ ಮಾಡುತ್ತಿದ್ದಾರೆ.
ಟಿಕೆಟ್ ಖರೀದಿಗೆ ಬೇಡಿಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ಕಚೇರಿಯ ಸ್ಪಂದನ ಕೇಂದ್ರದಲ್ಲಿ ಟಿಕೆಟ್ ಖರೀದಿ ಮಾಡಲು ಅವಕಾಶ ಕಲ್ಪಿಸಲಾಗಿದೆ.
ಈ ಬಗ್ಗೆ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಮಾಹಿತಿ ನೀಡಿದ್ದು, ಸರತಿ ಸಾಲಿನಲ್ಲಿ ನಿಂತು ಪಾಸ್ ಖರೀದಿ ಮಾಡಬಹುದು ಎಂದು ಮಾಹಿತಿ ನೀಡಿದ್ದಾರೆ.