ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಮೈಸೂರಿಗೆ ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರು ಲಗ್ಗೆಯಿಟ್ಟಿದ್ದಾರೆ.
ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಫಲಫುಷ್ಪ ಪ್ರದರ್ಶನ, ಆಹಾರ ಮೇಳ ನೋಡುವುದರ ಜೊತೆ ಜೊತೆಗೆ ಮೈಸೂರು ಅರಮನೆ, ಮೃಗಾಲಯ ಹಾಗೂ ಚಾಮುಂಡಿಬೆಟ್ಟ ನೋಡಲು ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಮೈಸೂರಿಗೆ ಲಗ್ಗೆಯಿಟ್ಟಿದ್ದಾರೆ.
ಇಂದು ಭಾನುವಾರದ ರಜೆ ಇರುವುದರಿಂದ ಮಕ್ಕಳೊಂದಿಗೆ ಮೈಸೂರಿಗೆ ಬಂದಿರುವ ಜನತೆ ಮೈಸೂರಿನಲ್ಲಿ ರೌಂಡ್ಸ್ ಹಾಕಿ ಖುಷಿಪಡುತ್ತಿದ್ದಾರೆ.
ಇನ್ನು ಸಂಜೆಯ ವೇಳೆಗೆ ದೀಪಾಲಂಕಾರ ನೋಡಲು ಕೂಡ ಸಾವಿರಾರು ಸಂಖ್ಯೆಯಲ್ಲಿ ಜನರು ಜಮಾಯಿಸಲಿದ್ದು, ಪ್ರಮುಖ ರಸ್ತೆಗಳಲ್ಲಂತೂ ಟ್ರಾಫಿಕ್ ಸಮಸ್ಯೆ ಉಂಟಾಗಲಿದೆ.
ಈ ಹಿನ್ನೆಲೆಯಲ್ಲಿ ಸಂಜೆಯ ವೇಳೆಗೆ ಪೊಲೀಸರು ವಾಹನ ಸಂಚಾರಕ್ಕೆ ಬದಲಿ ವ್ಯವಸ್ಥೆ ಮಾಡಲಿದ್ದು, ಸಂಚಾರಕ್ಕೆ ಅನುವು ಮಾಡಿಕೊಡಲಿದ್ದಾರೆ.