Mysore
28
scattered clouds

Social Media

ಸೋಮವಾರ, 23 ಡಿಸೆಂಬರ್ 2024
Light
Dark

ಕಾಂಗ್ರೆಸ್‌ ಹಿರಿಯ ನಾಯಕ ಹರಿಪ್ರಾಸಾದ್‌ ಸ್ಫೋಟಕ ಹೇಳಿಕೆ!

ಬೆಂಗಳೂರು: ಜಾತಿ ಜನಗಣತಿ ವರದಿ ಜಾರಿ ಬಗ್ಗೆ ಪರ ವಿರೋಧಗಳು ಆಗಿಂದಲೂ ಮುನ್ನಲೆಗೆ ಬರುತ್ತಲೇ ಇವೆ. ಜಾತಿ ಜನಗಣತಿ ಮಾಡಿಸಿರುವ ರಾಜ್ಯ ಕಾಂಗ್ರೆಸ್‌ ಹಾಗೂ ಬಿಜೆಪಿಯಲ್ಲೂ ಪರ ವಿರೋಧಗಳು ಇವೆ. ಆದರೆ, ಇದೀಗ ಕಾಂಗ್ರೆಸ್‌ನ ಹಿರಿಯ ನಾಯಕ ಹರಿಪ್ರಸಾದ್‌ ಜಾತಿ ಜನಗಣತಿ ಬಗ್ಗೆ ಸ್ಫೋಟಕ ಹೇಳಿಕೆಯೊಂದನ್ನ ನೀಡಿದ್ದಾರೆ.

ಬೆಂಗಳೂರಿನಲ್ಲಿ ಭಾನುವಾರು (ಅ.6) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸರ್ಕಾರ ಬಿದ್ದರೆ ಬೀಳಲಿ. ಆದರೆ ಜಾತಿ ಜನಗಣತಿಯನ್ನು ಜಾರಿ ಮಾಡಲೇಬೇಕು ಎಂದು ಹೇಳಿದ್ದಾರೆ.

ಜಾತಿಗಣತಿ ಜಾರಿ ವಿಚಾರ ಕಾಂಗ್ರೆಸ್‌ ಪ್ರಣಾಳಿಕೆಯಲ್ಲೇ ಇದೆ. ಆದರೆ ಇದನ್ನು ಜಾರಿಗೆ ತರಲು ಸರ್ಕಾರ ಯಾಕೆ ಯೋಚನೆ ಮಾಡುತ್ತಿದೆ? ಮೀನಾಮೇಷ ಎಣಿಸುವುದನ್ನು ಬಿಟ್ಟು ಈ ಕೂಡಲೇ ಜಾತಿಗಣತಿಯನ್ನು ಜಾರಿಗೆ ತರಲಿ ಎಂದು‌ ಬಿ.ಕೆ ಹರಿಪ್ರಾಸಾದ್ ಒತ್ತಾಯಿಸಿದ್ದಾರೆ.

ಕರ್ನಾಟಕದಲ್ಲಿ ಜಾತಿಗಣತಿ ಜಾರಿಗೆ ತರುವುದರಿಂದ ಎಲ್ಲಾ ಸಮುದಾಯಗಳಿಗೆ ಅನುಕೂಲವಾಗಲಿದೆ. ಜಾತಿಗಣತಿ ಜಾರಿಯಿಂದಲೇ ಸರ್ಕಾರ ಉರುಳುತ್ತದೆ ಎನ್ನುವುದಾದರೆ ಸರ್ಕಾರ ಬೀಳಲಿ ಬಿಡಿ ಎಂದಿದ್ದಾರೆ.

ಕೇಂದ್ರ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರಿಗೆ ಪ್ರಣಾಳಿಕೆ ಬಗ್ಗೆ ಗೌರವ ಇದೆ. ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ ಪಕ್ಷ ಜಾತಿಗಣತಿ ಜಾರಿ ಬಗ್ಗೆ ಉಲ್ಲೇಖಿಸಲಾಗಿದೆ. ಅಲ್ಲದೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಹ ಇದರ ಬಗ್ಗೆ ಪ್ರಸ್ಥಾಪಿಸಿ, ಜಾತಿ ಜನಗಣತಿ ಜಾರಿಯ ಪರವಿದ್ದಾರೆ ಎಂದರು.

ಚುನಾವಣೆ ಪ್ರಚಾರದ ವೇಳೆ ರಾಹುಲ್‌ ಅವರು ಪ್ರಪಂಚವೇ ಬಿದ್ದುಹೋದರೂ ಜಾತಿಗಣತಿ ಜಾರಿಯಾಗಬೇಕು ಎಂದೇ ಹೇಳಿದ್ದಾರೆ. ಹೀಗಾಗಿ ಪ್ರಪಂಚ ತಲೆ ಕೆಳಗಾದರು ಜಾತಿ ಜನಗಣತಿ ಜಾರಿಗೆ ತರಬೇಕು. ಸರ್ಕಾರ ಬಿದ್ದರೆ ಯಾಕೆ ಹೆದರಬೇಕು ಎಂದು ಬಿ.ಕೆ.ಹರಿಪ್ರಸಾದ್‌ ಪ್ರಶ್ನಿಸಿದ್ದಾರೆ.

Tags: