ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಮೈಸೂರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಲಗ್ಗೆ ಇಡುತ್ತಿದ್ದಾರೆ.
ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಲಕ್ಷಾಂತರ ಜನರು ಸೇರುವ ನಿರೀಕ್ಷೆಯಿದ್ದು, ಹೋಟೆಲ್ ಹಾಗೂ ಲಾಡ್ಜ್‌ಗಳಲ್ಲಿ ಕೊಠಡಿಗೆ ಬೇಡಿಕೆ ಹೆಚ್ಚಾಗಿದೆ.
ಈಗಾಗಲೇ ಅಕ್ಟೋಬರ್.12 ಹಾಗೂ ಹಿಂದಿನ ದಿನಕ್ಕೆ ಶೇಕಡಾ 95ರಷ್ಟು ಕೊಠಡಿಗಳು ಈಗಾಗಲೇ ಬುಕ್ ಆಗಿವೆ ಎಂಬ ಮಾಹಿತಿ ಲಭ್ಯವಾಗಿದೆ.
ವಾರಾಂತ್ಯದಲ್ಲಿ ಜಂಬೂಸವಾರಿ ನಡೆಯುತ್ತಿದ್ದು, ಇದಕ್ಕಾಗಿಯೇ ಹಲವು ಪ್ರವಾಸಿಗರು ಕುಟುಂಬ ಸಮೇತ ಮೈಸೂರಿಗೆ ಆಗಮಿಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಹೋಟೆಲ್ ಉದ್ಯಮಕ್ಕೂ ಚೇತರಿಕೆ ಕಂಡಿದ್ದು, ಈಗಾಗಲೇ ಎಲ್ಲಾ ಕೊಠಡಿಗಳು ಬುಕ್ ಆಗಿವೆ ಎನ್ನಲಾಗಿದೆ.