Mysore
27
scattered clouds

Social Media

ಶುಕ್ರವಾರ, 27 ಡಿಸೆಂಬರ್ 2024
Light
Dark

ಜಮ್ಮು-ಕಾಶ್ಮೀರದಲ್ಲಿ ಬಿಜೆಪಿಗೆ ಭಾರೀ ಮುಖಭಂಗ

ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ ಪಕ್ಷಕ್ಕೆ ಭಾರೀ ಮುಖಭಂಗವಾಗಿದ್ದು, ಕಾಂಗ್ರೆಸ್‌ ಮತ್ತು ಎನ್‌ಸಿ ಮೈತ್ರಿಕೂಟ ಗೆಲುವು ಸಾಧಿಸಿದೆ.

ಬಿಜೆಪಿ 25ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಬಿಜೆಪಿಗೆ ಹೀನಾಯ ಸೋಲಾಗಿದೆ. ಆರ್ಟಿಕಲ್‌ 370 ರದ್ದನ್ನು ಜಮ್ಮು-ಕಾಶ್ಮೀರದ ಜನತೆ ಒಪ್ಪಿಕೊಂಡಿದ್ದರು ಎನ್ನಲಾಗಿದ್ದು, ಬಿಜೆಪಿ ಸೋಲಿಗೆ ಕಾರಣ ಏನು ಎಂಬುದನ್ನು ಅಧ್ಯಯನ ಮಾಡಬೇಕಿದೆ.

90 ವಿಧಾನಸಭಾ ಕ್ಷೇತ್ರಗಳಿರುವ ಜಮ್ಮು-ಕಾಶ್ಮೀರದಲ್ಲಿ ದಶಕದ ಬಳಿಕ ಚುನಾವಣೆ ನಡೆದಿದೆ. ಆದರೆ ನಾವೇ ಹ್ಯಾಟ್ರಿಕ್‌ ಗೆಲುವು ಸಾಧಿಸುತ್ತೇವೆ ಎಂಬ ಆಸೆಯಲ್ಲಿದ್ದ ಬಿಜೆಪಿ ನಾಯಕರಿಗೆ ಈಗ ಬಿಗ್‌ ಶಾಕ್‌ ಎದುರಾಗಿದೆ.

ಚುನಾವಣೋತ್ತರ ಸಮೀಕ್ಷೆಗಳು ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್-ನ್ಯಾಷನಲ್‌ ಕಾನ್ಫರೆನ್ಸ್‌ ಮೈತ್ರಿಕೂಟಕ್ಕೆ ಮುನ್ನಡೆ ಇಲ್ಲವೇ ಸರಳ ಬಹುಮತದ ಸುಳಿವು ನೀಡಿದ್ದವು. ಈ ಸಮೀಕ್ಷೆ ವರದಿಗಳು ಈಗ ನಿಜವಾಗಿದ್ದು, ಕಾಂಗ್ರೆಸ್‌ ಹಾಗೂ ನ್ಯಾಷನಲ್‌ ಕಾನ್ಫರೆನ್ಸ್‌ ಮೈತ್ರಿಕೂಟದ ನಾಯಕರ ಮುಖದಲ್ಲಿ ಮಂದಹಾಸ ಮನೆಮಾಡಿದೆ.

ಜಮ್ಮು-ಕಾಶ್ಮೀರದ 90 ವಿಧಾನಸಭಾ ಸ್ಥಾನಗಳಿಗೆ ಸೆಪ್ಟೆಂಬರ್.‌18ರಿಂದ ಮೂರು ಹಂತಗಳಲ್ಲಿ ಮತದಾನ ನಡೆದಿತ್ತು. ಕಾಂಗ್ರೆಸ್‌ ಮತ್ತು ನ್ಯಾಷನಲ್‌ ಕಾನ್ಫರೆನ್ಸ್ ಪಕ್ಷಗಳು ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡರೆ, ಬಿಜೆಪಿ ಹಾಗೂ ಪಿಡಿಪಿ ಏಕಾಂಗಿಯಾಗಿ ಅಖಾಡದಲ್ಲಿದ್ದವು.

 

Tags: