Mysore
21
scattered clouds

Social Media

ಶುಕ್ರವಾರ, 27 ಡಿಸೆಂಬರ್ 2024
Light
Dark

ಚುನಾವಣಾ ಅಖಾಡದಲ್ಲಿ ಗೆದ್ದ ಕುಸ್ತಿಪಟು ವಿನೇಶ್‌ ಪೋಗಟ್‌

ಚಂಡೀಗಢ: ಹರಿಯಾಣ ಹಾಗೂ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಇಂದು ಪ್ರಕಟವಾಗಿದ್ದು, ಹರಿಯಾಣ ವಿಧಾನಸಭಾ ಕ್ಷೇತ್ರದಿಂದ ಮಾಜಿ ಕುಸ್ತಿಪಟು ವಿನೇಶ್‌ ಪೋಗಟ್‌ ಮೊದಲ ಬಾರಿಗೆ ಜಯ ಸಾಧಿಸಿದ್ದಾರೆ.

ವಿನೇಶ್‌ ಅವರು ಜಿಂದ್‌ ಜಿಲ್ಲೆಯ ಜೂಲಾನಾ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಪಕ್ಷದ ಯೋಗೀಶ್‌ ಕುಮಾರ್‌ ವಿರುದ್ಧ ಸ್ಪರ್ಧಿಸಿದ್ದರು.

ಇಂದು ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ವಿನೇಶ್‌ ಅವರು ಎದುರಾಳಿ ಪಕ್ಷದ ಅಭ್ಯರ್ಥಿ ವಿರುದ್ಧ 7 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಥಮ ಚುನಾವಣೆಯಲ್ಲೇ ಜಯಗಳಿಸಿದರು ಎಂಬ ಹೆಗ್ಗಳಿಕೆಗೆ ವಿನೇಶ್‌  ಪಾತ್ರರಾಗಿದ್ದಾರೆ.

Tags: