ಚಾಮರಾಜನಗರ: ಹರಿಯಾಣ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ.
ಈ ಹಿನ್ನೆಲೆಯಲ್ಲಿ ಚಾಮರಾಜನಗರದ ಪಚ್ಚಪ್ಪ ಸರ್ಕಲ್‌ನಲ್ಲಿ ಮಾಜಿ ಶಾಸಕ ಸಿ.ಎಸ್.ನಿರಂಜನ್ ಕುಮಾರ್ ನೇತೃತ್ವದಲ್ಲಿ ಸಂಭ್ರಮಾಚರಣೆ ಆಚರಿಸಲಾಯಿತು.
ಪಚ್ಚಪ್ಪ ಸರ್ಕಲ್‌ನಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು, ಪಕ್ಷದ ಬಾವುಟ ಹಿಡಿದು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಪರ ಘೋಷಣೆ ಕೂಗಿದರು.
ಬಳಿಕ ಸಿಹಿ ಹಂಚಿ ಸಂಭ್ರಮಿಸಿದ ಕಾರ್ಯಕರ್ತರು, ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸು ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಹರಿಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲುವು ಸಾಧಿಸಿದೆ. ಪ್ರತೀ ರಾಜ್ಯದಲ್ಲೂ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರುತ್ತದೆ. ಇದರಲ್ಲಿ ಯಾವುದೇ ಅನುಮಾನವಿಲ್ಲ. ಬಿಜೆಪಿ ಪಕ್ಷ ಜನರು ಹಾಗೂ ರೈತರ ಪರವಿದೆ. ಹಾಗಾಗಿ ಎಲ್ಲರೂ ಬಿಜೆಪಿ ಪರ ಒಲವು ತೋರಿಸುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.