Mysore
25
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಸಾಲೂರು ಬೃಹನ್ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗೆ ಸನ್ಮಾನ

ಹನೂರು: ಶ್ರೀ ಸಾಲೂರು ಬೃಹನ್ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿ ಅವರು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ಆಗಮ ಶಾಸ್ತ್ರದಲ್ಲಿ ʻಅಂಶುಮದಾಗಮಮ್ ಸಂಪಾದನಾತ್ಮಕಮಧ್ಯನಮ್ʼ ಎಂಬ ವಿಷಯದಲ್ಲಿ ಸಂಶೋಧನಾ ಪ್ರಬಂಧ ಮಂಡಿಸಿ ಪಿ.ಹೆಚ್.ಡಿ ಪದವಿಗೆ ಪಡೆದ ಹಿನ್ನೆಲೆ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ ಈ ರಘು ಸನ್ಮಾನಿಸಿದರು.

ನಂತರ ಮಾತನಾಡಿದ ಎಈ ರಘು, ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರು ಬಾಲ್ಯದಿಂದಲೇ ಕಷ್ಟಪಟ್ಟು ಓದಿ ಸಂಸ್ಕೃತ ವಿಷಯದಲ್ಲಿ ಪ್ರಬಂಧಗಳನ್ನು ಮಂಡಿಸಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುವ ವಿಶೇಷ ಹಬ್ಬ ಹರಿದಿನಗಳು, ಜಾತ್ರಾ ಮಹೋತ್ಸವ ಅಮಾವಾಸ್ಯೆ ಸೇರಿದಂತೆ ವಿಶೇಷ ಪೂಜೆಗಳಲ್ಲಿ ಭಾಗವಹಿಸಿ ಪ್ರತಿ ಕಾರ್ಯಕ್ರಮಗಳಿಗೂ ಮೆರಗು ತಂದಿದ್ದಾರೆ ಎಂದು ಹೇಳಿದರು.

ಶ್ರೀ ಸಾಲೂರು ಬೃಹನ್ ಮಠದ ವತಿಯಿಂದ ನಡೆಯುತ್ತಿರುವ ಶಾಲಾ-ಕಾಲೇಜುಗಳ ಅಭಿವೃದ್ಧಿಯಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದಾರೆ. ನಗರ ಪ್ರದೇಶಗಳ ಖಾಸಗಿ ಶಾಲೆಯಲ್ಲಿ ಸಿಗುವ ಶಿಕ್ಷಣದಂತೆ ಶ್ರೀ ಮಠದಲ್ಲಿಯೂ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇದಲ್ಲದೆ ಬಿಡುವಿನ ವೇಳೆ ವಿಶೇಷವಾಗಿ ಸಂಸ್ಕೃತಕ್ಕೆ ಹೆಚ್ಚು ಒತ್ತು ನೀಡಿ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ಆಗಮ ಶಾಸ್ತ್ರದಲ್ಲಿ ಅಂಶುಮದಾಗಮಮ್ ಸಂಪಾದನಾತ್ಮಕಮಧ್ಯನಮ್ ಎಂಬ ವಿಷಯ ಸಂಶೋಧನಾ ಪ್ರಬಂಧವನ್ನು ಮಂಡಿಸಿ ಡಾಕ್ಟರೇಟ್ ಪಡೆದುಕೊಂಡಿರುವುದು ಹೆಮ್ಮೆಯ ವಿಚಾರ ಎಂದರು.

ಈ ವೇಳೆ ಪ್ರಾಧಿಕಾರದ ಆಗಮಿಕರಾದ ಕರವೀರ ಸ್ವಾಮಿ, ಉಪ ಕಾರ್ಯದರ್ಶಿ ಚಂದ್ರಶೇಖರ್, ಮಾನಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ದತ್ತೇಶ್ ಕುಮಾರ್, ಹಿರಿಯ ಮುಖಂಡರಾದ ಪೊನ್ನಾಚಿ ಮಹಾದೇವಸ್ವಾಮಿ ಬೇಡಗಂಪಣ ಸಮುದಾಯದ ಗೌರವಾಧ್ಯಕ್ಷ ಪುಟ್ಟಣ್ಣ ಅಧ್ಯಕ್ಷ ಕೆ ವಿ ಮಾದೇಶ್, ಪಾರು ಪತ್ತೇದಾರ ಮಹಾಲಿಂಗನ ಕಟ್ಟೆ ಮಹಾದೇವಸ್ವಾಮಿ, ಸಿಬ್ಬಂದಿಗಳಾದ ರವೀಂದ್ರ, ಉಮೇಶ್, ಸಂಪತ್ ಸೇರಿದಂತೆ ಇನ್ನಿತರರು ಹಾಜರಿದ್ದರು.

Tags: