Mysore
23
haze

Social Media

ಶುಕ್ರವಾರ, 02 ಜನವರಿ 2026
Light
Dark

ಜಂಬೂಸವಾರಿ ಮೆರವಣಿಗೆಗೆ ಪೊಲೀಸರಿಂದ ಬಿಗಿ ಭದ್ರತೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಪೊಲೀಸ್‌ ಇಲಾಖೆಯಿಂದ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಈ ಬಗ್ಗೆ ಮೈಸೂರು ನಗರ ಪೊಲೀಸ್‌ ಕಮಿಷನರ್‌ ಸೀಮಾ ಲಾಟ್ಕರ್‌ ಮಾಹಿತಿ ನೀಡಿದ್ದಾರೆ.

ಈ ಬಾರಿಯ ದಸರಾ ಮಹೋತ್ಸವಕ್ಕೆ ಎರಡು ಹಂತದ ಭದ್ರತೆ ಕೈಗೊಳ್ಳಲಾಗಿದ್ದು, ಜಂಬೂಸವಾರಿ ಸಾಗುವ ಮಾರ್ಗದಲ್ಲಿ ವ್ಯಾಪಕ ಬಂದೋಬಸ್ತ್‌ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ರಾಜ್ಯದ ವಿವಿಧೆಡೆಗಳಿಂದ ಆಗಮಿಸಿರುವ ನಾಲ್ಕು ಸಾವಿರಕ್ಕೂ ಹೆಚ್ಚು ಪೊಲೀಸರು ಜಂಬೂಸವಾರಿ ದಿನ ಬಿಗಿ ಭದ್ರತೆ ಕೈಗೊಂಡು ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಿದ್ದಾರೆ.

ಇನ್ನು ಜಂಬೂಸವಾರಿ ಸಾಗುವ ಮಾರ್ಗದಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ದೇಶ ವಿದೇಶಗಳಿಂದ ಆಗಮಿಸುವ ಪ್ರವಾಸಿಗರಿಗೆ ರಕ್ಷಣೆ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

 

 

Tags:
error: Content is protected !!