Mysore
23
overcast clouds

Social Media

ಬುಧವಾರ, 05 ಆಗಸ್ಟ್ 2026
Light
Dark

ಮುಡಾ ಹಗರಣ: ಲೋಕಾಯುಕ್ತ ಕಚೇರಿಗೆ ಆಗಮಿಸಿದ ಸಿಎಂ ಬಾಮೈದ ಮಲ್ಲಿಕಾರ್ಜುನಸ್ವಾಮಿ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಂಬಂಧಿಕರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್‌ ನೀಡಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನಸ್ವಾಮಿ ಅವರಿಂದು ಲೋಕಾಯುಕ್ತ ಕಚೇರಿಗೆ ವಿಚಾರಣೆಗೆಂದು ಆಗಮಿಸಿದ್ದಾರೆ.

ರಾಜ್ಯದಲ್ಲಿ ಮುಡಾ ಹಗರಣ ಭಾರೀ ಸದ್ದು ಮಾಡುತ್ತಿದ್ದು, ದಿನದಿಂದ ದಿನಕ್ಕೆ ಹಗರಣದ ಸುದ್ದಿ ಜಾಸ್ತಿಯಾಗುತ್ತಲೇ ಇದೆ. ಸಿಎಂ ಸಿದ್ದರಾಮಯ್ಯ ಅವರೇ ಹಗರಣದ ಪ್ರಮುಖ ಆರೋಪಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮುಡಾ ಕೇಸ್‌ ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ.

ಇನ್ನು ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಂಬಂಧಿಕರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿಂದು ಸಿಎಂ ಬಾಮೈದ ಮಲ್ಲಿಕಾರ್ಜುನಸ್ವಾಮಿ ಅವರು ಲೋಕಾಯುಕ್ತ ಕಚೇರಿಗೆ ಆಗಮಿಸಿ ವಿಚಾರಣೆ ಎದುರಿಸುತ್ತಿದ್ದಾರೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮಲ್ಲಿಕಾರ್ಜುನಸ್ವಾಮಿಗೆ ಪೊಲೀಸರು ಪ್ರಶ್ನೆಗಳ ಸುರಿಮಳೆ ಗೈದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ವಿಚಾರಣೆ ಬಳಿಕವೇ ಸತ್ಯಾಂಶ ಹೊರಬರಬೇಕಾಗಿದೆ.

 

Tags:
error: Content is protected !!