ಬೆಳಗಾವಿ: ಕೆಲವು ದಿನಗಳ ಬಳಿಕ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಆಗೋದು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.
ಈ ಬಗ್ಗೆ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ರಾಜ್ಯದ ಜನರು ರಾಜಕೀಯ ಬೆಳವಣಿಗೆಯನ್ನು ನೋಡಲಿದ್ದಾರೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಎಲ್ಲಾ ಹಿರಿಯರು ಹಾಗೂ ಪಕ್ಷದ ವರಿಷ್ಠರು ನನಗೆ ಒಳ್ಳೆಯ ಅವಕಾಶ ನೀಡಿದ್ದಾರೆ. ಹಿರಿಯರಿಗೆ ನನ್ನನ್ನು ಅರ್ಥ ಮಾಡಿಕೊಳ್ಳಲು ಸ್ವಲ್ಪ ಸಮಯ ಬೇಕಾಗುತ್ತದೆ. ಆದ್ದರಿಂದ ಕೆಲವರ ನಡೆಯನ್ನು ಪಕ್ಷ ವಿರೋಧಿ ಚಟುವಟಿಕೆ ಎಂದು ಭಾವಿಸಿದರೆ ತಪ್ಪಾಗುತ್ತದೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಮುನ್ನಡೆಸುತ್ತೇನೆ ಎಂದರು.