Mysore
25
few clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ನಾಳೆ ಆಯುಧಪೂಜೆ ಹಿನ್ನೆಲೆ ಮೈಸೂರಿನಲ್ಲಿ ಹೂವು-ಹಣ್ಣು ಖರೀದಿ ಭರಾಟೆ ಜೋರು

ಮೈಸೂರು: ನಾಳೆ ಆಯುಧಪೂಜೆಯ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹೂವು-ಹಣ್ಣುಗಳ ಖರೀದಿ ಭರಾಟೆ ಜೋರಾಗಿದೆ.

ಇಂದು ಬೆಳಿಗ್ಗೆಯಿಂದಲೇ ಜನರು ಹೂವು-ಹಣ್ಣು, ಬಾಳೆಕಂಬ ಸೇರಿದಂತೆ ಪೂಜಾ ಸಾಮಾಗ್ರಿಗಳನ್ನು ಖರೀದಿ ಮಾಡುತ್ತಿದ್ದು, ಹೂವುಗಳ ಬೆಲೆಯಂತೂ ಗಗನಕ್ಕೇರಿದೆ.

ಇನ್ನು ಕೆಲವು ಹಣ್ಣುಗಳು ಮತ್ತು ಹೂವುಗಳ ಬೆಲೆಗಳು ಕಳೆದ ವಾರದಿಂದಲೇ ಹೆಚ್ಚಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬೀಳುವಂತಾಗಿದೆ.

ಆಯುಧಪೂಜೆಯ ಹಿನ್ನೆಲೆಯಲ್ಲಿ ಸೇವಂತಿಗೆ, ಮಾರಿಗೋಲ್ಡ್‌ ಹಾಗೂ ಗುಲಾಬಿ ಹೂಗಳಿಗೆ ಬೇಡಿಕೆ ಹೆಚ್ಚಾಗಿದ್ದರೂ ಗ್ರಾಹಕರು ಖರೀದಿ ಮಾಡುತ್ತಿರುವುದು ವಿಶೇಷವೆನಿಸಿದೆ.

ಮೈಸೂರಿನ ಪ್ರಮುಖ ರಸ್ತೆಗಳು ಹಾಗೂ ದೇವರಾಜ ಮಾರುಕಟ್ಟೆಯಲ್ಲಿ ಜನಜಂಗುಳಿ ಏರ್ಪಟ್ಟಿದ್ದು, ಕಾಲಿಡಲು ಜಾಗವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ.

ಜನಜಂಗುಳಿ ಏರ್ಪಟ್ಟಿರುವ ಹಿನ್ನೆಲೆಯಲ್ಲಿ ರಸ್ತೆಗಳಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಗಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಸಂಜೆಯ ವೇಳೆಗೆ ಖರೀದಿ ಭರಾಟೆ ಇನ್ನೂ ಹೆಚ್ಚಾಗಲಿದ್ದು, ಮುನ್ನೆಚ್ಚರಿಕೆಗಾಗಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

Tags: