ರಾಮನಗರ: ಕೋವಿಡ್ ಖರೀದಿ ಹಗರಣದ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಎಸ್ ಐಟಿ ರಚನೆ ಮಾಡಿರುವ ಬಗ್ಗೆ ಕಟುವಾಗಿ ಟೀಕಿಸಿರುವ ಕೇಂದ್ರ ಸಚಿವ ಕುಮಾರಸ್ವಾಮಿ, ಈ ಭಜನೆ ಕಳೆದ ಒಂದೂವರೆ ವರ್ಷದಿಂದ ನಡೆಯುತ್ತಿದೆ ಎಂದು ಲೇವಡಿ ಮಾಡಿದರು.
ಇದೇ ಕಾಂಗ್ರೆಸ್ ನಾಯಕರು ಪ್ರತಿಪಕ್ಷದಲ್ಲಿ ಇದ್ದಾಗ ಕೋವಿಡ್ ಖರೀದಿ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆ ಮಾಡಿದ್ದರು. ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷರು ಕಾಂಗ್ರೆಸ್ ಪಕ್ಷಕ್ಕೆ ಸೇರಿದವರೇ ಇದ್ದರು. ಆಗ ಏನು ಮಾಡುತ್ತಿದ್ದರು. ಇವರು ಅಧಿಕಾರಕ್ಕೆ ಬಂದು ಒಂದೂವರೆ ವರ್ಷ ಆಯಿತು. ಆಗಿನಿಂದ ಏನು ಮಾಡುತ್ತಿದ್ದರು? ತನಿಖೆ ಯಾಕೆ ಮಾಡಲಿಲ್ಲ? ಈಗ ಮೂಡಾ, ವಾಲ್ಮೀಕಿ ಹಗರಣಗಳು ಸರ್ಕಾರವನ್ನು ಸುತ್ತಿಕೊಂಡಿವೆ. ಅದಕ್ಕೆ ಜನರ ಗಮನ ಬೇರೆಡೆಗೆ ಸೆಳೆಯುವ ಹುನ್ನಾರದಿಂದ ಎಸ್ ಐಟಿ ಭಜನೆ ನಡೆಯುತ್ತಿದೆ ಎಂದು ಅವರು ಹೇಳಿದರು.