Mysore
23
broken clouds

Social Media

ಸೋಮವಾರ, 23 ಡಿಸೆಂಬರ್ 2024
Light
Dark

ನಾಡಿನಾದ್ಯಂತ ಆಯುಧ ಪೂಜೆ ಸಂಭ್ರಮ

ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆ ಸೇರಿದಂತೆ ರಾಜ್ಯಾದ್ಯಂತ ಆಯುಧ ಪೂಜೆಯ ಸಂಭ್ರಮ ಮನೆಮಾಡಿದೆ.

ಬೆಳಿಗ್ಗೆಯಿಂದಲೇ ಮೈಸೂರು ಅರಮನೆಯಲ್ಲಿ ವಿಶೇಷ ಪೂಜೆಗಳು ಆರಂಭವಾಗಿವೆ. ಆಯುಧ ಪೂಜೆ ನವರಾತ್ರಿ ಹಬ್ಬದ ಒಂದು ಭಾಗವಾಗಿದ್ದು, ಇದೊಂದು ಹಿಂದೂ ಹಬ್ಬ ಕೂಡ ಆಗಿದೆ.

ಅರಮನೆಯ ಕಲ್ಯಾಣ ಮಂಟಪಕ್ಕೆ ಪಟ್ಟದ ಆನೆ, ಕುದುರೆ ಮತ್ತು ಪಟ್ಟದ ಹಸು ಆಗಮಿಸಿದ ಬಳಿಕ ಆಯುಧ ಪೂಜೆ ನೆರವೇರಿದೆ.

ಇಂದು ಮೈಸೂರು ಅರಮನೆಯಲ್ಲಿ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು, ಆಯುಧ ಪೂಜೆ ನೆರವೇರಿಸಿದ್ದಾರೆ.

ಯದುವೀರ್‌ ಒಡೆಯರ್‌ ಅವರು, ಅರಮನೆಯಲ್ಲಿನ ಆಯುಧಗಳಿಗೆ ಪೂಜೆ ನೆರವೇರಿಸಿ, ಖಾಸಗಿ ದರ್ಬಾರ್‌ ನಡೆಸಿದ್ದಾರೆ.

ಈ ಮಧ್ಯೆ ನಾಳೆ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿ ನಡೆಯಲಿದ್ದು, ಇದರೊಂದಿಗೆ ಕಳೆದ ಹತ್ತು ದಿನಗಳಿಂದ ಸಾಂಪ್ರಾಯಿಕವಾಗಿ ನಡೆಯುತ್ತಿರುವ ನಾಡಹಬ್ಬ ಮೈಸೂರು ದಸರಾಗೆ ತೆರೆ ಬೀಳಲಿದೆ.

Tags: