Mysore
27
scattered clouds

Social Media

ಸೋಮವಾರ, 12 ಜನವರಿ 2026
Light
Dark

ಕನ್ನಡ ರಾಜೋತ್ಸವ ದಿನದಂದು ಕನ್ನಡ ಬಾವುಟ ಹಾರಿಸುವುದು ಕಡ್ಡಾಯ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ನವೆಂಬರ್‌.1 ರಂದು 50ನೇ ಕನ್ನಡ ವರ್ಷದ ಕನ್ನಡ ರಾಜೋತ್ಸವನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸುವುದರಿಂದ ಎಲ್ಲಾ ಶಾಲೆ, ಕಾಲೇಜು, ಕಾರ್ಖಾನೆ ಹಾಗೂ ಐಟಿಬಿಟಿ ಕಚೇರಿಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ ಹಾರಿಸಲೇಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಆದೇಶ ಹೊರಡಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೆಂಬರ್‌.1ರಂದು ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳಾಗುತ್ತವೆ. ಹೀಗಾಗಿ 50ನೇ ವರ್ಷದ ಕನ್ನಡ ರಾಜೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಿದ್ದೇವೆ. ಆ ದಿನದಂದೇ ರಾಷ್ಟ್ರ ಧ್ವಜ ರೀತಿ ಕನ್ನಡ ಬಾವುಟಕ್ಕೆ ಗೌರವ ನೀಡಿ, ಬಾವುಟ ಹಾರಿಸುವ ಮೂಲಕ ಶ್ರದ್ಧಾ ಭಕ್ತಿ ಗೌರವ ತೋರಿಸಬೇಕು. ಅಲ್ಲದೇ ಸಾಂಸ್ಕೃತಿಕ ಕಾರ್ಯಗಳನ್ನು ಕಡ್ಡಾಯವಾಗಿ ಮಾಡಬೇಕು ಎಂದು ಹೇಳಿದರು.

ಬೆಂಗಳೂರಿನಲ್ಲಿ ಶೇ.50 ರಷ್ಟು ಸಾರ್ವಜನಿಕರು ಹೊರಗಿನಿಂದ ಬಂದವರು ಇದ್ದಾರೆ. ಹೊರ ರಾಜ್ಯದಿಂದ ಬಂದವರು ಕೂಡ ಕನ್ನಡ ಕಲಿಯಬೇಕು ಎಂದು ಸೂಚನೆ ನೀಡಿದರು.

Tags:
error: Content is protected !!