Mysore
29
light rain

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಜಂಬೂಸವಾರಿ ಮೆರವಣಿಗೆಯಲ್ಲಿ ಕೆಆರ್‌ಎಸ್‌, ರಂಗನತಿಟ್ಟು ಸ್ತಬ್ಧಚಿತ್ರ

ಮಂಡ್ಯ: ಸಕ್ಕರೆ ನಾಡು ಮಂಡ್ಯ ಜಿಲ್ಲೆಯ ಹಿರಿಯ ಮತ್ತು ಪ್ರತಿಷ್ಠೆಯಾದ ಕೆಆರ್‌ಎಸ್‌ ಹಾಗೂ ರಂಗನತಿಟ್ಟು ಪಕ್ಷಿಧಾಮದ ಪ್ರತಿರೂಪ ಮಾದರಿ ಈ ಬಾರಿಯ ಮೈಸೂರು ದಸರಾ ಮೆರವಣಿಗೆಯಲ್ಲಿ ಪ್ರದರ್ಶನಗೊಳ್ಳುತ್ತಿರುವುದು ವಿಶೇಷವೆನಿಸಿದೆ.

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಮಂಡ್ಯ ಜಿಲ್ಲೆಯಿಂದ ಪ್ರತಿ ವರ್ಷ ಒಂದೊಂದು ಸ್ತಬ್ಧಚಿತ್ರ ಸಿದ್ಧಪಡಿಸಿ ಕಳುಹಿಸಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಈ ವರ್ಷ ಕೆಆರ್‌ಎಸ್‌ ಜಲಾಶಯ ಮತ್ತು ರಂಗನತಿಟ್ಟು ಪಕ್ಷಿಧಾಮದ ಮಾದರಿಯನ್ನು ಒಂದೇ ಸ್ತಬ್ಧಚಿತ್ರದಲ್ಲಿ ನಿರ್ಮಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈಗಾಗಲೇ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ನಾಳೆ ಜಂಬೂಸವಾರಿ ಮೆರವಣಿಗೆಯಲ್ಲಿ ಈ ಸ್ತಬ್ಧಚಿತ್ರ ಸಾಗಲಿದೆ.

ಪ್ರವಾಸಿಗರಿಗೆ ಪರಿಚಯಿಸುವ ಉದ್ದೇಶದಿಂದ ಈ ಸ್ತಬ್ಧಚಿತ್ರ ತಯಾರು ಮಾಡಲಾಗಿದ್ದು, ಇದರಿಂದ ರಂಗನತಿಟ್ಟು ಪಕ್ಷಿಧಾಮಕ್ಕೆ ಇನ್ನೂ ಹೆಚ್ಚಿನ ಪ್ರವಾಸಿಗರು ಬರುವ ನಿರೀಕ್ಷೆಯಿದೆ.

 

Tags: